ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ
ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ

ಶಶಿಕಲಾ ಪದಚ್ಯುತಿ ಸಭೆಗೆ ಬೆಂಗಳೂರು ನ್ಯಾಯಾಲಯ ತಡೆ

ನಗರದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಅಣ್ಣಾ ಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾರನ್ನು ಹುದ್ದೆಯಿಂದ ವಜಾಗೊಳಿಸುವ ಸಲುವಾಗಿ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ನೇತೃತ್ವದ ಪಕ್ಷದ ಬಣ ಮಂಗಳವಾರ ಹಮ್ಮಿಕೊಂಡಿದ್ದ ಸಾಮಾನ್ಯ ಮಂಡಳಿ ಸಭೆಗೆ...
ಬೆಂಗಳೂರು: ನಗರದ ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ಅಣ್ಣಾ ಡಿಎಂಕೆ ಪ್ರಧಾನ ಕಾರ್ಯದರ್ಶಿ ವಿ.ಕೆ. ಶಶಿಕಲಾರನ್ನು ಹುದ್ದೆಯಿಂದ ವಜಾಗೊಳಿಸುವ ಸಲುವಾಗಿ ತಮಿಳುನಾಡು ಮುಖ್ಯಮಂತ್ರಿ ಪಳನಿಸ್ವಾಮಿ ನೇತೃತ್ವದ ಪಕ್ಷದ ಬಣ ಮಂಗಳವಾರ ಹಮ್ಮಿಕೊಂಡಿದ್ದ ಸಾಮಾನ್ಯ ಮಂಡಳಿ ಸಭೆಗೆ ಬೆಂಗಳೂರು ಸಿಟಿ ಸಿವಿಲ್ ನ್ಯಾಯಾಲಯದ ಸೋಮವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ. 
ಪಕ್ಷದ ಬೈಲಾ ನಿಯಮಗಳನ್ನು ಉಲ್ಲಂಘಿಸಿ ಕರೆಯಲಾಗಿರುವ ಸಭೆಗೆ ತಡೆಯಾಜ್ಞೆ ನೀಡಬೇಕೆಂದು ಕೋರಿ ಎಐಡಿಎಂಕೆ ಪಕ್ಷದ ಕರ್ನಾಟಕ ರಾಜ್ಯ ಘಟಕದ ಕಾರ್ಯದರ್ಶಿ ಪುಗುಳೇಂದಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶ ಪಾಟೀಲ್ ನಾಗಲಿಂಗಗೌಡ ತಡೆಯಾಜ್ಞೆ ನೀಡಿ ಆದೇಶಿಸಿದ್ದಾರೆ. ಆದರೆ, ಅತ್ತ ಚೆನ್ನೈನಲ್ಲಿ ಸಭೆಗೆ ತಡೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಮದ್ರಾಸ್ ಹೈಕೋರ್ಟ್ ವಜಾ ಮಾಡಿದೆ. 
ಹೀಗಾಗಿ ಸಭೆ ನಡೆಯುವ ಬಗ್ಗೆ ಗೊಂದಲ ಉಂಟಾಗಿದೆ. ಅದಾಗ್ಯೂ ಸಭೆಗೆ ಹೈಕೋರ್ಟ್ ಹಸಿರು ನಿಶಾನೆ ತೋರಿಸಿರುವ ಕಾರಣ ಸಭೆ ನಿಶ್ಚಿತ ಎಂದು ಕೆಲ ಮೂಲಗಳು ತಿಳಿಸಿವೆ. 

Related Stories

No stories found.

Advertisement

X
Kannada Prabha
www.kannadaprabha.com