ಮಹಾದಾಯಿ ವಿವಾದವನ್ನು ಕಾಂಗ್ರೆಸ್ ಮತ್ತಷ್ಟು ಉಲ್ಬಣಗೊಳಿಸುತ್ತಿದೆ: ಬಿಜೆಪಿ

ಮಹಾದಾಯಿ ನದಿ ವಿವಾದ ಸಂಬಂಧವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ಆರೋಪ-ಪ್ರತ್ಯಾರೋಪಗಳು ಆರಂಭವಾಗಿದೆ. ..
ಮುರುಳೀಧರ ರಾವ್
ಮುರುಳೀಧರ ರಾವ್
ಬೆಂಗಳೂರು: ಮಹಾದಾಯಿ ನದಿ ವಿವಾದ ಸಂಬಂಧವಾಗಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ರಾಜಕೀಯ ಆರೋಪ-ಪ್ರತ್ಯಾರೋಪಗಳು ಆರಂಭವಾಗಿದೆ. 
ಪಕ್ಕದ ಗೋವಾ ಮತ್ತು ಮಹಾರಾಷ್ಟ್ರ ರಾಜ್ಯಗಳ ಕಾಂಗ್ರೆಸ್ ನಾಯಕರನ್ನು ಸಿಎಂ ಸಿದ್ದರಾಮಯ್ಯ ಮನವೊಲಿಸಿದರೇ ಒಂದೇ ದಿನದಲ್ಲಿ ಸಮಸ್ಯೆ ಬಗೆಹರಿಸುವುದಾಗಿ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗೂ ರಾಜ್ಯ ಬಿಜೆಪಿ ಉಸ್ತುವಾರಿ ಮುರುಳಿಧರ ರಾವ್ ಹೇಳಿದ್ದಾರೆ.
ಮಹಾದಾಯಿ ವಿವಾದವನ್ನು ಕಾಂಗ್ರೆಸ್ ನಾಯಕರು ಮತ್ತಷ್ಟು ಜಟಿಲಗೊಳಿಸುತ್ತಿದ್ದಾರೆ ಎಂದು ಆರೋಪಿಸಿರುವ ಅವರು, ಗೋವಾ ಮತ್ತು ಮಹಾರಾಷ್ಟ್ರ ಹಾಗೂ ಕರ್ನಾಟಕ ರಾಜ್ಯಗಳಲ್ಲಿ ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಸಮಸ್ಯೆ ಬಗೆಹರಿಸಲು ಕೇಂದ್ರ ಕಾಂಗ್ರೆಸ್ ನಾಯಕರು ಪ್ರಯತ್ನ ಪಡಲಿಲ್ಲ, ಆದರೆ ಈಗ ಸಿದ್ದರಾಮಯ್ಯ  ಮಹಾದಾಯಿ ನದಿ ವಿವಾದದಲ್ಲಿ ಕೇಂದ್ರ ಸರ್ಕಾರ ಮದ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಲಿಲ್ಲ ಎಂದು ಹೇಳುತ್ತಿದ್ದಾರೆ ಎಂದು ರಾವ್ ಲೇವಡಿ ಮಾಡಿದ್ದಾರೆ.
ಮಹಾದಾಯಿ ನದಿ ವಿವಾದವನ್ನು ರಾಜ್ಯ ಬಿಜೆಪಿ ಅಧ್ಯಕ್ಷ ಯಡಿಯೂರಪ್ಪ ಬಗೆಹರಿಸುತ್ತಾರೆ. ಈ ಸಂಬಂಧ ಎರಡು ರಾಜ್ಯಗಳ ಮುಖ್ಯಮಂತ್ರಿಗಳ ಜೊತೆ ಚರ್ಚಿಸಲಿದ್ದಾರೆ ಎಂದು ಹೇಳಿದ್ದಾರೆ. ಆದರೆ ಸಿಎಂ ಸಿದ್ದರಾಮಯ್ಯ ಎರಡು ರಾಜ್ಯಗಳ ಕಾಂಗ್ರೆಸ್ ನಾಯಕರನ್ನು ಕರೆತರಬೇಕು ಎಂದು ಸವಾಲು ಹಾಕಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com