ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ
ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ

ಬೆಂಗಳೂರು: 2,000 ಕೋಟಿ ರೂ.ವೆಚ್ಚದಲ್ಲಿ ಸಂಚಾರ ದಟ್ಟಣೆ ಮುಕ್ತ ರಸ್ತೆ ನಿರ್ಮಾಣ

ನಗರದ ಸುತ್ತಮುತ್ತ ಸಂಚಾರ ದಟ್ಟಣೆಯನ್ನು ತಗ್ಗಿಸಲು ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ...
ಬೆಂಗಳೂರು: ನಗರದ ಸುತ್ತಮುತ್ತ ಸಂಚಾರ ದಟ್ಟಣೆಯನ್ನು ತಗ್ಗಿಸಲು ಮತ್ತು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ರಸ್ತೆ ಸಂಪರ್ಕವನ್ನು ಅಭಿವೃದ್ಧಿಪಡಿಸಲು ನಾಲ್ಕು ರಸ್ತೆಗಳನ್ನು ಉನ್ನತ ದರ್ಜೆಗೇರಿಸಲು 2,095 ಕೋಟಿ ರೂಪಾಯಿಗಳ ಬಿಡುಗಡೆಯ ಪ್ರಸ್ತಾವನೆಗೆ ರಾಜ್ಯ ಸಚಿವ ಸಂಪುಟ ಅನುಮೋದನೆ ನೀಡಿದೆ.
ಉದ್ದೇಶಿತ ಯೋಜನೆಯಡಿ 150 ಕಿಲೋ ಮೀಟರ್ ಉದ್ದದ ರಸ್ತೆಯನ್ನು ಉನ್ನತ ದರ್ಜೆಗೇರಿಸುವ ಕಾಮಗಾರಿಯನ್ನು ಕರ್ನಾಟಕ ರಸ್ತೆ ಅಭಿವೃದ್ಧಿ ನಿಗಮ ಕೈಗೊಳ್ಳಲಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ಏಕಮುಖ ಸಂಚಾರ ರಸ್ತೆಯನ್ನು ದ್ವಿಮುಖ ಸಂಚಾರ ರಸ್ತೆಯನ್ನಾಗಿ ಮೇಲ್ದರ್ಜೆಗೇರಿಸಲಾಗುವುದು. ವಿಮಾನ ನಿಲ್ದಾಣಕ್ಕೆ ಹೋಗುವ ಬಳ್ಳಾರಿ ರಸ್ತೆಯಲ್ಲಿ ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಮತ್ತು ಬೆಂಗಳೂರು ಸುತ್ತಮುತ್ತ ಸಂಚಾರ ದಟ್ಟಣೆಯನ್ನು ಕಡಿಮೆ ಮಾಡಲು ರಸ್ತೆಗಳನ್ನು ಮೇಲ್ದರ್ಜೆಗೇರಿಸುವ ಕಾರ್ಯ ಸಹಾಯವಾಗಲಿದೆ ಎಂದು ಅವರು ಹೇಳಿದರು.
ಐಟಿ ಉದ್ಯಮ ಕೇಂದ್ರವಾದ ವೈಟ್ ಫೀಲ್ಡ್, ಎಲೆಕ್ಟ್ರಾನಿಕ್ ಸಿಟಿ, ಕೈಗಾರಿಕಾ ಉದ್ಯಮ ಕೇಂದ್ರವಾದ ಹೊಸೂರು ರಸ್ತೆ, ತುಮಕೂರು ರಸ್ತೆ ಮೊದಲಾದ ಕಡೆಗಳಲ್ಲಿ ಸಂಚಾರ ದಟ್ಟಣೆ ತೀವ್ರವಾಗಿರುತ್ತದೆ. ಇಲ್ಲಿಗೆ ಸಂಪರ್ಕ ಕಲ್ಪಿಸುವ ರಸ್ತೆಗಳನ್ನು ಮೇಲ್ದರ್ಜೆಗೇರಿಸುವುದರಿಂದ ಸಂಚಾರ ದಟ್ಟಣೆ ಸುಗಮವಾಗುವುದಲ್ಲದೆ ವಿಮಾನ ನಿಲ್ದಾಣಕ್ಕೆ ಕೂಡ ಬೇಗನೆ ತಲುಪಬಹುದು.
ಎಲ್ಲಾ ಜಿಲ್ಲಾ ಕೇಂದ್ರ ಪಟ್ಟಣಗಳಲ್ಲಿ ರಿಂಗ್ ರಸ್ತೆ ನಿರ್ಮಿಸುವ ಮೂಲಕ ರಾಜ್ಯ ಸರ್ಕಾರ 2ನೇ ಶ್ರೇಣಿಯ ನಗರ ಮತ್ತು ಪಟ್ಟಣಗಳ ಸಂಚಾರ ದಟ್ಟಣೆ ಸಮಸ್ಯೆಯನ್ನು ತಗ್ಗಿಸಲು ಕೂಡ ಕ್ರಮ ಕೈಗೊಳ್ಳಲಿದೆ.

Related Stories

No stories found.

Advertisement

X
Kannada Prabha
www.kannadaprabha.com