ಮಾಜಿ ಸಚಿವ ಖಮರುಲ್ ಇಸ್ಲಾಂ ನಿಧನ!

ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಖಮರುಲ್ ಇಸ್ಲಾಂ ಅವರು ಸೋಮವಾರ ವಿಧಿವಶರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.
ಮಾಜಿ ಸಚಿವ ಖಮರುಲ್ ಇಸ್ಲಾಂ (ಸಂಗ್ರಹ ಚಿತ್ರ)
ಮಾಜಿ ಸಚಿವ ಖಮರುಲ್ ಇಸ್ಲಾಂ (ಸಂಗ್ರಹ ಚಿತ್ರ)
Updated on
ಬೆಂಗಳೂರು: ಹಿರಿಯ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಖಮರುಲ್ ಇಸ್ಲಾಂ ಅವರು ಸೋಮವಾರ ವಿಧಿವಶರಾಗಿದ್ದಾರೆ. ಅವರಿಗೆ 69 ವರ್ಷ ವಯಸ್ಸಾಗಿತ್ತು.
ಹೃದಯಾಘಾತಕ್ಕೊಳಗಾಗಿ ಖಮರುಲ್ ಇಸ್ಲಾಂ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಹಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಮಾಜಿ ಸಚಿವ ಖಮರುಲ್ ಇಸ್ಲಾಂ​ ಅವರನ್ನು ಇತ್ತೀಚೆಗೆ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ ಇಂದು ಹೃದಯಘಾತದಿಂದ ಅವರು ಮೃತಪಟ್ಟಿದ್ದಾರೆ ಎಂದು ಮಾಧ್ಯಮವೊಂದು ವರದಿ ಮಾಡಿದೆ.

ಪ್ರಸ್ತುತ ಮೃತರ ಪಾರ್ಥಿವ ಶರೀರವನ್ನು ಆರ್​.ಟಿ.ನಗರದಲ್ಲಿರುವ ನಿವಾಸಕ್ಕೆ ರವಾನಿಸಲಾಗುತ್ತಿದೆ ಎಂದು ತಿಳಿದುಬಂದಿದ್ದು, ಇಂದು ಸಂಜೆ ತವರೂರಾದ ಕಲಬುರ್ಗಿಗೆ ಖಮರುಲ್ ಇಸ್ಲಾಂ ಅವರ ಪಾರ್ಥಿವ ಶರೀರವನ್ನು ರವಾನೆ ಮಾಡಲಾಗುತ್ತದೆ.

1948 ಜನವರಿ 27ರಂದು ಜನಿಸಿದ ಖಮರುಲ್ ಇಸ್ಲಾಂ ಅವರು ಕಲಬುರ್ಗಿ ಉತ್ತರ ಕ್ಷೇತ್ರದ ಶಾಸಕರಾಗಿದ್ದರು. 6 ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಖಮರುಲ್ ಇಸ್ಲಾಂ, ಮೊದಲಿಗೆ 1978ರಲ್ಲಿ ಶಾಸಕರಾಗಿ ಆಯ್ಕೆಯಾಗಿದ್ದರು. ಅಲ್ಲದೆ ಕೇರಳ ಕಾಂಗ್ರೆಸ್ ನ ಉಸ್ತುವಾರಿಯಾಗಿಯೂ ಸೇವೆ ಸಲ್ಲಿಸುತ್ತಿದ್ದರು. ಖಮರುಲ್ ಇಸ್ಲಾಂ 1996-98ರವರೆಗೆ ಸಂಸದರಾಗಿದ್ದರು. ಎಸ್.ಎಂ.ಕೃಷ್ಣ ಅವಧಿಯಲ್ಲಿ 1999-2004ರವರೆಗೆ ಸಚಿವರಾಗಿದ್ದರು. ಬಳಿಕ ಸಿದ್ದರಾಮಯ್ಯ ಸಂಪುಟದಲ್ಲಿಯೂ 2013-16ರವರೆಗೆ ವಕ್ಫ್, ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ಮತ್ತು ಹಜ್ ಸಚಿವರಾಗಿ ಖಮರುಲ್ ಇಸ್ಲಾಂ ಅವರು ಕಾರ್ಯ ನಿರ್ವಹಿಸಿದ್ದರು.

ವಕ್ಫ್ ಮಂಡಳಿಗೆ ಸೇರಿದ ಭೂಮಿಯನ್ನು ಅಕ್ರಮವಾಗಿ ಒತ್ತುವರಿ ಮಾಡಿಕೊಂಡ ಪ್ರಕರಣದಲ್ಲಿ ಖಮರುಲ್ ಇಸ್ಲಾಂ ಅವರ ಹಸ್ತಕ್ಷೇಪವಿದೆ ಎಂದು ಆರೋಪಿಸಿ ಮಂಡಳಿಯ ಅಧ್ಯಕ್ಷರಾಗಿದ್ದ ಅನ್ವರ್ ಮಾಣಿಪ್ಪಾಡಿ ಅವರು ಖಮರುಲ್ ಇಸ್ಲಾಂ ಅವರ ವಿರುದ್ಧ ದೂರು ಕೂಡ ಸಲ್ಲಿಕೆ ಮಾಡಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಈ ವಿಭಾಗದ ಇತರ ಸುದ್ದಿ

No stories found.

X

Advertisement

X
Kannada Prabha
www.kannadaprabha.com