ಬೆಂಗಳೂರು: ರಾಜ್ಯ ಸರ್ಕಾರ ಬಿಜೆಪಿ ನಾಯಕರ ದೂರವಾಣಿ ಕದ್ದಾಲಿಕೆ ಮಾಡುತ್ತಿದೆ ಎಂಬ ಬಿಜೆಪಿ ನಾಯಕ ಆರ್ ಅಶೋಕ್ ಆರೋಪಕ್ಕೆ ಪ್ರತಿಕ್ರಿಯೆ ನೀಡಿರುವ ಸಿಎಂ ಸಿದ್ದರಾಮಯ್ಯ, ದೂರವಾಣಿ ಕದ್ದಾಲಿಕೆ ಮಾಡುತ್ತಿರುವುದು ಕೇಂದ್ರ ಸರ್ಕಾರವೇ ಹೊರತು ರಾಜ್ಯ ಸರ್ಕಾರವಲ್ಲ ಎಂದಿದ್ದಾರೆ.
ದೂರವಾಣಿ ಕದ್ದಾಲಿಕೆ ಮಾಡುವ ಮಟ್ಟಕ್ಕೆ ರಾಜ್ಯ ಸರ್ಕಾರ ಇಳಿದಿಲ್ಲ. ದೂರವಾಣಿ ಕದ್ದಾಲಿಕೆ ಮಾಡುತ್ತಿರುವುದು ಕೇಂದ್ರ ಸರ್ಕಾರ ರಾಜ್ಯ ಸರ್ಕಾರವಲ್ಲ. ಆದರೆ ಈ ಬಗ್ಗೆ ರಾಜ್ಯ ಬಿಜೆಪಿ ನಾಯಕರಿಗೆ ಅರಿವಿಲ್ಲ ಎಂದು ಸಿದ್ದರಾಮಯ್ಯ ಹೇಳಿದ್ದಾರೆ.
ದೂರವಾಣಿ ಕದ್ದಾಲಿಕೆಯ ಆರೋಪವನ್ನು ನಾವೆಂದೂ ಮಾಡಿಲ್ಲ, ಏಕೆಂದರೆ ಅದನ್ನು ಸಣ್ಣ ವಿಷಯವೆಂದು ಪರಿಗಣಿಸಿದ್ದೇವೆ ಎಂದು ಸಿಎಂ ತಿಳಿಸಿದ್ದಾರೆ.