ಕೊಪ್ಪಳ: ಆನೆಗುಂಡಿ-ಹಂಪಿ ಸಂಪರ್ಕ ಸೇತುವೆ ನಾಳೆ ಮುಖ್ಯಮಂತ್ರಿಯಿಂದ ಉದ್ಘಾಟನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ...
ಉದ್ಘಾಟನೆಗೊಳ್ಳಲಿರುವ ಸೇತುವೆಯ ಒಂದು ನೋಟ
ಉದ್ಘಾಟನೆಗೊಳ್ಳಲಿರುವ ಸೇತುವೆಯ ಒಂದು ನೋಟ
ಕೊಪ್ಪಳ: ಮುಖ್ಯಮಂತ್ರಿ ಸಿದ್ದರಾಮಯ್ಯ ನಾಳೆ ಕೊಪ್ಪಳ ಜಿಲ್ಲೆಯಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ನೆರವೇರಿಸಲಿದ್ದಾರೆ. ಅವುಗಳಲ್ಲಿ ಮುಖ್ಯವಾದುದು ಜಿಲ್ಲೆಯ ಗಂಗಾವತಿ ತಾಲ್ಲೂಕಿನಲ್ಲಿರುವ ಆನೆಗುಂಡಿ ಮತ್ತು ಬಳ್ಳಾರಿ ಜಿಲ್ಲೆಯಲ್ಲಿರುವ ವಿಶ್ವ ವಿಖ್ಯಾತ ಐತಿಹಾಸಿಕ ಸ್ಥಳ ಹಂಪಿಯನ್ನು ಸಂಪರ್ಕಿಸುವ ಸೇತುವೆಯನ್ನು ಉದ್ಘಾಟಿಸುವುದಾಗಿದೆ.
ತುಂಗಭದ್ರಾ ಜಲಾಶಯದ ಅಡ್ಡಲಾಗಿ ಕಟ್ಟಿಸಿರುವ ಸೇತುವೆ ಗಂಗಾವತಿ ತಾಲ್ಲೂಕಿನ ಕಡೆಬಾಗಿಲು ಗ್ರಾಮವನ್ನು ಬಳ್ಳಾರಿ ಜಿಲ್ಲೆಯ ಹೊಸಪೇಟೆ ತಾಲ್ಲೂಕಿನ ಬುಕ್ಕಸಾಗರ ಗ್ರಾಮವನ್ನು ಸಂಪರ್ಕಿಸುತ್ತದೆ. 2014ರ ಮಾರ್ಚ್ 4ರಂದು ಸೇತುವೆ ನಿರ್ಮಾಣಕ್ಕೆ ಶಂಕು ಸ್ಥಾಪನೆ ನೆರವೇರಿಸಲಾಗಿತ್ತು. ಸೇತುವೆ ನಿರ್ಮಾಣ ಕಾರ್ಯ ಕಳೆದ ವರ್ಷ ಡಿಸೆಂಬರ್ ಗೆ ಮುಕ್ತಾಯವಾಗಿತ್ತು. 40.20 ಕೋಟಿ ರೂಪಾಯಿ ವೆಚ್ಚದಲ್ಲಿ 487.50 ಮೀಟರ್ ಉದ್ದದ ಸೇತುವೆಯನ್ನು ನಿರ್ಮಿಸಲಾಗಿದ್ದು ಇದು ಆನೆಗುಂಡಿ ಮತ್ತು ಹಂಪಿ ನಡುವಿನ ಪ್ರಯಾಣದ ದೂರವನ್ನು 14 ಕಿಲೋ ಮೀಟರ್ ಕಡಿಮೆ ಮಾಡುತ್ತದೆ.
ವಿಜಯನಗರ ಸಾಮ್ರಾಜ್ಯದ ತೊಟ್ಟಿಲು ಎಂದು ಆನೆಗುಂಡಿಯನ್ನು ಕರೆಯಲಾಗುತ್ತಿದ್ದು, ಇಲ್ಲಿ ಹನುಮ ದೇವರ ಜನ್ಮಸ್ಥಳ ಎಂದು ನಂಬಲಾಗುವ ಅಂಜನಾದ್ರಿ ಬೆಟ್ಟ, ಪಂಪ ಸರೋವರ ಮತ್ತು ಗಗನ್ ಮಹಲ್ ಗಳಿವೆ. ಕೊಪ್ಪಳ ವೈದ್ಯಕೀಯ ವಿಜ್ಞಾನ ಸಂಸ್ಥೆಯನ್ನು ಕೂಡ ಮುಖ್ಯಮಂತ್ರಿ ಉದ್ಘಾಟಿಸಲಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com