ಮೈಸೂರಿನಲ್ಲಿ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಭಾಷಣೆ ಮಾಡಿದ ಸಿಎಂ ಸಿದ್ದರಾಮಯ್ಯ ಅವರು, ಸುಪ್ರೀಂ ಕೋರ್ಟ್ ಕಾವೇರಿ ನೀರು ನಿರ್ವಹಣಾ ಮಂಡಳಿ ರಚನೆಯಾಗಬೇಕು ಎಂದು ಹೇಳಿದೆಯಾದರೂ, ಸುಪ್ರೀಂ ಕೋರ್ಟ್ ಗೆ ಮಂಡಳಿ ರಚನೆಗೆ ಅಧಿಕಾರವಿಲ್ಲ. ಸಂಸತ್ತಿಗೆ ಮಾತ್ರ ಆ ಅಧಿಕಾರವಿದ್ದು, ಈ ಬಗ್ಗೆ ಈ ಹಿಂದೆ ಕೇಂದ್ರ ಸರ್ಕಾರದವೇ ನ್ಯಾಯಾಲಯಕ್ಕೆ ಅಫಿಡವಿಟ್ ಸಲ್ಲಿಸಿದೆ ಎಂದು ಹೇಳಿದರು.
ಇದೇ ವೇಳೆ ಕಾವೇರಿ ನೀರು ನಿರ್ವಹಣಾ ಮಂಡಳಿ ರಾಜ್ಯದ ಪಾಲಿಗೆ ಕರಾಳ ಶಾಪವಾಗಲಿದ್ದು, ಇದೇ ಕಾರಣಕ್ಕೆ ನಾವು ಕಾವೇರಿ ನಿರ್ವಹಣಾ ಮಂಡಳಿ ರಚನೆಗೆ ವಿರೋಧ ವ್ಯಕ್ತಪಡಿಸುತ್ತಿದ್ದೇವೆ. ಈ ಬಗ್ಗೆ ನಮ್ಮ ರಾಜ್ಯದ ವಕೀಲರನ್ನು ನಾವು ಸಂಪರ್ಕಿಸಿದ್ದು, ನ್ಯಾಯಾಲಯಲ್ಲಿ ಸಮರ್ಥವಾಗಿ ವಾದ ಮಂಡಿಸುವಂತೆ ಸೂಚಿಸಿದ್ದೇವೆ ಎಂದು ಸಿದ್ದರಾಮಯ್ಯ ಹೇಳಿದರು.