ಕಲಬುರಗಿಯಲ್ಲಿ ಸೆ.24ಕ್ಕೆ ಲಿಂಗಾಯತ ರ್ಯಾಲಿ: ಎಂ.ಬಿ.ಪಾಟೀಲ್

ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಘೋಷಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ಇದೇ ಭಾನುವಾರ ಕಲಬುರಗಿಯಲ್ಲಿ....
ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್
ಜಲ ಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್
Updated on: 
ಕಲಬುರಗಿ: ಲಿಂಗಾಯತ ಪ್ರತ್ಯೇಕ ಧರ್ಮ ಎಂದು ಘೋಷಿಸುವಂತೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ತರಲು ಇದೇ ಭಾನುವಾರ ಕಲಬುರಗಿಯಲ್ಲಿ ಲಿಂಗಾಯತರ ಸಾಮೂಹಿಕ ರ್ಯಾಲಿಯನ್ನು ಆಯೋಜಿಸಲಾಗಿದೆ ಎಂದು ಜಲಸಂಪನ್ಮೂಲ ಸಚಿವ ಎಂ.ಬಿ.ಪಾಟೀಲ್ ತಿಳಿಸಿದ್ದಾರೆ.
ಈ ಉದ್ದೇಶಿತ ರ್ಯಾಲಿಗೂ ಕಾಂಗ್ರೆಸ್ ಪಕ್ಷಕ್ಕೂ ಯಾವುದೇ ಸಂಬಂಧವಿಲ್ಲ. ಪಕ್ಷವನ್ನು ಹೊರತುಪಡಿಸಿ ಲಿಂಗಾಯತ ಸಮುದಾಯದ ಯಾರು ಬೇಕಾದರೂ ಈ ರ್ಯಾಲಿಯಲ್ಲಿ ಭಾಗವಹಿಸಬಹುದು ಎಂದು ಹೇಳಿದರು.
ಕರ್ನಾಟಕ, ಮಹಾರಾಷ್ಟ್ರ, ತೆಲಂಗಾಣ, ಆಂಧ್ರ ಪ್ರದೇಶ ಮತ್ತು ತಮಿಳು ನಾಡುಗಳಿಂದ ಈ ಬೃಹತ್ ರ್ಯಾಲಿಯಲ್ಲಿ ಸುಮಾರು 5 ಲಕ್ಷ ಜನ ಭಾಗವಹಿಸುವ ನಿರೀಕ್ಷೆಯಿದೆ ಎಂದರು.
ಕಲಬುರಗಿಯಲ್ಲಿ ನಡೆಯುವ ರ್ಯಾಲಿ ಬಗ್ಗೆ ಲಿಂಗಾಯತ ಮುಖಂಡರು ಈಗಾಗಲೇ ಎರಡು ಸುತ್ತಿನ ಜಾಗೃತಿ ನಡೆಸಿದ್ದಾರೆ. ಹೈದರಾಬಾದ್-ಕರ್ನಾಟಕ ಭಾಗದಲ್ಲಿ ಕಾರ್ಯಕರ್ತರು ಮನೆ ಮನೆಗೆ ತೆರಳಿ ರ್ಯಾಲಿಯಲ್ಲಿ ಭಾಗವಹಿಸುವಂತೆ ಲಿಂಗಾಯತ ಸಮುದಾಯದವರಿಗೆ ಮನವಿ ಮಾಡಿದ್ದಾರೆ ಎಂದು ಪಾಟೀಲ್ ಹೇಳಿದರು.
ವೀರಶೈವ ಸಮುದಾಯಕ್ಕೆ ಪ್ರತ್ಯೇಕ ಧಾರ್ಮಿಕ ಮಾನ್ಯತೆ ನೀಡುವಂತೆ ಈ ಹಿಂದೆ ಕೇಂದ್ರ ಸರ್ಕಾರಕ್ಕೆ ಮನವಿ ಸಲ್ಲಿಸಲಾಗಿತ್ತು. ವೀರಶೈವ ಧರ್ಮಕ್ಕೆ ನೀಡದಿರುವುದರಿಂದ ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧಾರ್ಮಿಕ ಮಾನ್ಯತೆ ನೀಡುವಂತೆ ಮನವಿ ಮಾಡಿಕೊಳ್ಳುತ್ತಿದ್ದೇವೆ ಎಂದು ಪಾಟೀಲ್ ಹೇಳಿದರು.
1993ರಲ್ಲಿ ಯುಪಿಎ ಸರ್ಕಾರ ಕೇಂದ್ರದಲ್ಲಿ ಅಧಿಕಾರದಲ್ಲಿದ್ದಾಗ ಜೈನ ಧರ್ಮಕ್ಕೆ ಪ್ರತ್ಯೇಕ ಮಾನ್ಯತೆ ನೀಡಲಾಗಿತ್ತು. ಅದೇ ರೀತಿ ಲಿಂಗಾಯತ ಧರ್ಮಕ್ಕೆ ಕೂಡ ಪ್ರತ್ಯೇಕ ಧರ್ಮದ ಮಾನ್ಯತೆ ನೀಡಬೇಕೆಂದು ನಾವು ಒತ್ತಾಯಿಸುತ್ತಿದ್ದೇವೆ ಎಂದು ಎಂ.ಬಿ.ಪಾಟೀಲ್ ತಿಳಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com