ಸುಕ್ರಿ ಬೊಮ್ಮಗೌಡ, ಸಾಕ್ಷಿ ಮಲಿಕ್ ಸೇರಿ ಐವರಿಗೆ ಚುಂಚಶ್ರೀ ಪ್ರಶಸ್ತಿಯ ಗರಿ
ಆದಿಚುಂಚನಗಿರಿ ಮಠದ ವತಿಯಿಂದ ನೀಡಲಾಗುವ 2017ನೇ ಸಾಲಿನ ಚುಂಚಶ್ರೀ ಪ್ರಶಸ್ತಿಗೆ ಪದ್ಮಶ್ರೀ ಪುರಸ್ಕೃತರಾದ ಜಾನಪದ ಕಲಾವಿದೆ ಸುಕ್ರಿ ಬೊಮ್ಮಗೌಡ, ಒಲಂಪಿಕ್ ಪದಕ ವಿಜೇತೆ ಸಾಕ್ಷಿ ಮಲ್ಲಿಕ್ ಸೇರಿ ಐವರು ಗಣ್ಯರನ್ನು ಆಯ್ಕೆ ಮಾಡಲಾಗಿದೆ.
ಮಂಡ್ಯ: ಆದಿಚುಂಚನಗಿರಿ ಮಠದ ವತಿಯಿಂದ ನೀಡಲಾಗುವ 2017ನೇ ಸಾಲಿನ ಚುಂಚಶ್ರೀ ಪ್ರಶಸ್ತಿಗೆ ಪದ್ಮಶ್ರೀ ಪುರಸ್ಕೃತರಾದ ಜಾನಪದ ಕಲಾವಿದೆ ಸುಕ್ರಿ ಬೊಮ್ಮಗೌಡ, ಒಲಂಪಿಕ್ ಪದಕ ವಿಜೇತೆ ಸಾಕ್ಷಿ ಮಲ್ಲಿಕ್ ಸೇರಿ ಐವರು ಗಣ್ಯರನ್ನು ಆಯ್ಕೆ ಮಾಡಲಾಗಿದೆ.
ಬೆಂಗಳೂರಿನ ಪದ್ಮಶ್ರೀ ಡಾ.ಮಾಲತಿ ಹೊಳ್ಳ, ಸಾಹಿತ್ಯ ಕ್ಷೇತ್ರದಿಂದ ತುಮಕೂರಿನ ಡಾ.ಡಿ.ಕೆ.ರಾಜೇಂದ್ರ, ಬೆಂಗಳೂರಿನ ಪ್ರೊ. ಶಿವರಾಮ್ ಅಗ್ನಿಹೋತ್ರಿಯವರನ್ನು ಚುಂಚಶ್ರೀ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಭಾನುವಾರ ಆದಿಚುಂಚನಗಿರಿಯಲ್ಲಿ ನಡೆಯಲಿರುವ ಸಮಾರಂಭದಲ್ಲಿ ಪೀಠಾಧ್ಯಕ್ಷರಾದ ಡಾ.ನಿರ್ಮಲಾನಂದನಾಥ ಸ್ವಾಮಿಗಳು ಗಣ್ಯರಿಗೆ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ.
ಪ್ರಶಸ್ತಿಯು ತಲಾ 50ಸಾವಿರ ರೂಪಾಯಿ ನಗದು ಹಾಗೂ ಪ್ರಶಸ್ತಿ ಫಲಕವನ್ನು ಒಳಗೊಂಡಿ