ಜೀವ ಬೆದರಿಕೆ, ಅಪಹರಣ, ಅಕ್ರಮ ಹಣ ಸಾಗಣೆ, ಹವಾಲಾ ದಂಧೆ ಸೇರಿದಂತೆ ಹಲವಾರು ಪ್ರಕರಣಗಳಲ್ಲಿ ಬಾಂಬ್ ನಾಗನ ವಿರುದ್ಧ ದೂರು ದಾಖಲಾಗಿತ್ತು. ಇದೇ ಕಾರಣಕ್ಕೆ ಶ್ರೀರಾಂಪುರದಲ್ಲಿರುವ ಬಾಂಬ್ ನಾಗನ ಕಚೇರಿ ಹಾಗೂ ಮನೆಯ ಮೇಲೆ ಪೊಲೀಸರು ದಾಳಿ ನಡೆಸಿ ಅಪಾರ ಪ್ರಮಾಣದ ಬ್ಯಾನ್ ಆಗಿದ್ದ ನೋಟುಗಳನ್ನು ವಶಕ್ಕೆ ಪಡೆದಿದ್ದರು. ಬಳಿಕ ತಲೆಮರೆಸಿಕೊಂಡಿದ್ದ ನಾಗನನ್ನು ಪೊಲೀಸರು ಬಂಧಿಸಿದ್ದರು.
ಇದೀಗ ಎರಡು ಲಕ್ಷ ರೂ. ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ಮತ್ತು ಪ್ರತೀ ಗುರುವಾರ ತನಿಖಾಧಿಕಾರಿಗಳ ಮುಂದೆ ಹಾಜರಾಗಬೇಕು ಎಂಬ ಷರತ್ತಿನೊಂದಿಗೆ ಹೈ ಕೋರ್ಟ್ ಏಕಸದಸ್ಯ ಪೀಠ ನಾಗ ಮತ್ತು ಆತನ ಇಬ್ಬರು ಪುತ್ರರಾದ ಶಾಸ್ತ್ರೀ ಮತ್ತು ಗಾಂಧಿಗೆ ಜಾಮೀನು ಮಂಜೂರು ಮಾಡಿದೆ.
ಮೂವರು ಉದ್ಯಮಿಗಳಿಗೆ ವಂಚಿಸಿದ ಆರೋಪ ಸೇರಿದಂತೆ ಇನ್ನಿತರ ಪ್ರಕರಣಗಳಿಗೆ ಸಂಬಂಧಿಸಿ ನಾಗರಾಜು, ಆತನ ಮಕ್ಕಳಾದ ಗಾಂಧೀ,ಶಾಸ್ತ್ರೀ, ಸಹಚರರಾದ ಜಯ ಕೃಷ್ಣ, ಸರವಣ್, ಸೌಂದರ್ಯರಾಜ್ ರನ್ನು ಪೊಲೀಸರು ವಶಕ್ಕೆ ಪಡೆದಿದ್ದರು.