ಬೆಳಗಾವಿ: ಶ್ರೀರಾಮ ಸೇನೆ ಕಾರ್ಯಕರ್ತನ ಹತ್ಯೆ

ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತನೊಬ್ಬನನ್ನು ಇರಿದು ಕೊಲೆ ಮಾಡಿದ ಘಟನೆ ಭಾನುವಾರ ತಡರಾತ್ರಿ ನಡೆದಿದೆ ಎಂದು ತಿಳಿದುಬಂದಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
Updated on
ಬೆಳಗಾವಿ: ಬೆಳಗಾವಿಯಲ್ಲಿ ಶ್ರೀರಾಮ ಸೇನೆ ಕಾರ್ಯಕರ್ತನೊಬ್ಬನನ್ನು ಇರಿದು ಕೊಲೆ ಮಾಡಿದ ಘಟನೆ ಭಾನುವಾರ ತಡರಾತ್ರಿ ನಡೆದಿದೆ ಎಂದು ತಿಳಿದುಬಂದಿದೆ.
ಮಾಧ್ಯಮಗಳು ವರದಿ ಮಾಡಿರುವಂತೆ ಬೆಳಗಾವಿ ಜಿಲ್ಲೆಯ ಗೋಕಾಕ್ ನಲ್ಲಿ ರೋಹಿತ್‌ ರಾಜು ಪಾಟೀಲ(26 ವರ್ಷ) ಎಂಬಾತನನ್ನು ದುಷ್ಕ್ರಮಿಗಳು ಚಾಕುವಿನಿಂದ ಇರಿದು ಹತ್ಯೆ ಮಾಡಲಾಗಿದೆ ಎಂದು ವರದಿಯಾಗಿದೆ. ಬೈಕ್‌ ನಲ್ಲಿ  ಬಂದಿದ್ದ ದುಷ್ಕರ್ಮಿಗಳು ನಗರದ ಅಪ್ಸರಾ ಕೂಟದ ಸರ್ಕಲ್‌ ಬಳಿ ರೋಹಿತ್ ನನ್ನು ತಡೆದು ಕಣ್ಣಿಗೆ ಖಾರದ ಪುಡಿ ಎರಚಿ ಚಾಕುವಿನಿಂದ ತಿವಿದು ಕೊಂದು ಹಾಕಿದ್ದಾರೆ ಎಂದು ತಿಳಿದು ಬಂದಿದೆ.

ಪ್ರಸ್ತುತ ಗೋಕಾಕ್‌ ಟೌನ್‌ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಶವವನ್ನು ಪೊಲೀಸರು ಮರಣೋತ್ತರ ಪರೀಕ್ಷೆ ರವಾನಿಸಿ ತನಿಖೆ ಮುಂದುವರೆಸಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com