ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಕಾರಣ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಿದೆ. ಇದೇ ವೇಳೆ ಚಿಕ್ಕಬಳ್ಳಾಪುರದಲ್ಲಿ ಸಿಡಿ;ಉ ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ.
ಬೆಂಗಳೂರು: ಅರಬ್ಬಿ ಸಮುದ್ರದಲ್ಲಿ ಉಂಟಾದ ವಾಯುಭಾರ ಕುಸಿತದ ಕಾರಣ ಬೆಂಗಳೂರು ಸೇರಿದಂತೆ ರಾಜ್ಯಾದ್ಯಂತ ವ್ಯಾಪಕ ಮಳೆಯಾಗಿದೆ. ಇದೇ ವೇಳೆ ಚಿಕ್ಕಬಳ್ಳಾಪುರದಲ್ಲಿ ಸಿಡಿ;ಉ ಬಡಿದು ಇಬ್ಬರು ಸಾವನ್ನಪ್ಪಿದ್ದಾರೆ.
ಚಿಕ್ಕಬಳ್ಳಾಪುರದ ಬಾಗೇಪಲ್ಲಿ ತಾಲ್ಲೂಕಿನ ಕೊತ್ತಕೋಟೆ ಗ್ರಾಮ ಪಂಚಾಯತಿಯ ರಾಮನೊಡ್ಡಂಪಲ್ಲಿ ಗ್ರಾಮದ ನರಸಿಂಹಪ್ಪ (60), ಸದಾಶಿವ (48) ಎನ್ನುವ ಇಬ್ಬರು ಸಿಡಿಲಿಗೆ ಬಲಿಯಾಗಿದ್ದಾರೆ.
ಚಿಕ್ಕಬಳ್ಳಾಪುರ ತಾಲೂಕಿನ ಮಂಡಿಕಲ್ ಹೋಬಳಿಯಲ್ಲಿ ಆಲಿಕಲ್ಲು ಸಹಿತ ಧಾರಾಕಾರ ಮಳೆಯಾಗಿದೆ. ಅಕಾಲಿಕ ಮಳೆಯಿಂದಾಗಿ ರೈತರು ಬೆಳೆದಿದ್ದ ಕೋಟ್ಯಾಂತರ ರೂ. ಮೌಲ್ಯದ ಬೆಳೆ ನಷ್ಟವಾಗಿದೆ.
ರಾಯಚೂರಿನ ಮಾನ್ವಿ ತಾಲೂಕಿನ ಕೋಳಿಕ್ಯಾಪ್ ರೈತರೊಬ್ಬರು ಸಿಡಿಲಿನಿಂದಾಗಿ ಗಾಯಗೊಂಡಿದ್ದಾರೆ.
ಹಾಸನದಲ್ಲಿ ಜೆಡಿಎಸ್ ವಿಕಾಸ ಪರ್ವ ಯಾತ್ರೆಗೆ ಮಳೆ ಅಡ್ಡಿಯಾಗಿತ್ತು. ಮಳೆಯಲ್ಲಿಯೇ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ರೋಡ್ ಶೋ ನಡೆಸಿದ್ದರು.
ಬೆಂಗಳೂರಿನಲ್ಲಿ ಮಳೆ
ಇಂದು ರಾಜಧಾನಿ ಬೆಂಗಳೂರಿನಲ್ಲಿ ಸಹ ವ್ಯಾಪಕ ಮಳೆಯಾಗಿದೆ. ಮೆಜೆಸ್ಟಿಕ್, ಕೆಆರ್ ಪುರಂ, ಶಿವಾನಂದ ಸರ್ಕಲ್, ಜಯನಗರ ಸೇರಿದಂತೆ ನಗರದ ಹಲವು ಭಾಗಗಳಲ್ಲಿ ಅಕಾಲಿಕ ಮಳೆಯಾಗಿದೆ. ನಗರದಲ್ಲಿ ಗುಡುಗು ಸಹಿತ ಭಾರೀ ಮಳೆಯಾಗಿದೆ.
ವಾಯುಭಾರ ಕುಸಿತದ ಕಾರಣ ಬೆಂಗಳೂರು ಹಾಗೂ ರಾಜ್ಯದ ವಿವಿಧೆಡೆ ಇನ್ನೂ ಎರಡು ದಿನಗಳ ಕಾಲ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.