ಮೇಕೆದಾಟು ಯೋಜನೆ ವೇಗ ಹೆಚ್ಚಿಸಿ: ಜನನಾಯಕರಿಗೆ ಮೈಸೂರು ಮತದಾರರ ಆಗ್ರಹ

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚುನಾವಣಾ ಕಾವು ಏರುತ್ತಿದೆ, ಪ್ರಚಾರದಲ್ಲಿ ತೊಡಗಿರುವ ಪ್ರಮುಖ ರಾಜಕೀಯ ಪಕ್ಷಗಳು ಪರಸ್ಪರ ಕೆಸರೆರಚಾಟದಲ್ಲಿ ...
ಗಗನ ಚುಕ್ಕಿ ಜಲಪಾತ
ಗಗನ ಚುಕ್ಕಿ ಜಲಪಾತ
Updated on: 
ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಚುನಾವಣಾ ಕಾವು ಏರುತ್ತಿದೆ, ಪ್ರಚಾರದಲ್ಲಿ ತೊಡಗಿರುವ ಪ್ರಮುಖ ರಾಜಕೀಯ ಪಕ್ಷಗಳು ಪರಸ್ಪರ ಕೆಸರೆರಚಾಟದಲ್ಲಿ ತೊಡಗಿವೆ. ಆದರೆ ಈ ರಾಜಕೀಯ ಪಕ್ಷಗಳು ಮೇಕೆದಾಟು ಯೋಜನೆ ಬಗ್ಗೆ ಎಲ್ಲಿಯೂ ತುಟಿ ಬಿಚ್ಚುತ್ತಿಲ್ಲ.
ಕಳೆದ ಹಲವು ವರ್ಷಗಳಿಂದ ಬೆಂಗಳೂರು ಸೇರಿದಂತೆ ಹಲವು ನಗರಗಳಲ್ಲಿ ಕುಡಿಯುವ ನೀರಿನ ಸಮಸ್ಯೆಯಿದೆ. ಹೀಗಾಗಿ ರಾಜಕೀಯ ಪಕ್ಷಗಳು  ಮೇಕೆದಾಟು ಯೋಜನೆಗೆ ಬೆಂಬಲ ನೀಡಿ ಶೀಘ್ರವೇ ಯೋಜನೆ ಪೂರ್ಣಗೊಳಿಸುವುದಾಗಿ ಪ್ರತಿಜ್ಞೆ ಮಾಡಬೇಕು ಈ ಯೋಜನೆಯಿಂದ ಕುಡಿಯುವ ನೀರಿನ ಪೂರೈಕೆ ಜೊತೆಗೆ ಜಲ ವಿದ್ಯುತ್ ಯೋಜನೆ ಕೂಡ ನಡಜೆಸಬಹುದು ಎಂದು ಕರ್ನಾಟಕ ಕಬ್ಬು ಬೆಳೆಗಾರರ ಅಸೋಸಿಯೇಷನ್ ಅಧ್ಯಕ್ಷ ಕುರುಬೂರು ಶಾಂತ ಕುಮಾರ್ ಹೇಳಿದ್ದಾರೆ.
ಬೆಂಗಳೂರು ಸೇರಿದಂತೆ ಉಳಿದ ನಗರಗಳಲ್ಲಿನ ಭವಿಷ್ಯದ ಪೀಳಿಗೆಗೆ  24/7 ಕಾಲ ಕುಡಿಯುವ ನೀರಿನ ಸೌಲಭ್ಯ ದೊರೆಯಬೇಕು, ಸಾವಿರಾರು ಅಡಿ ಭೂಮಿ ಕೊರೆದು ಕಲುಷಿತ ನೀರು ಕುಡಿಯುವ ಬದಲು ಈ ಯೋಜನೆ ಪೂರ್ಣಗೊಳಿಸುವುದು ಬಹಳ ಉತ್ತಮವಾದ ಕೆಲಸ ಎಂದು ತಿಳಿಸಿದ್ದಾರೆ.
ಕೃಷ್ಣರಾಜ ಸಾಗರ ಜಲಾಶಯವನ್ನು ನೀರಾವರಿ ಉದ್ದೇಶಕ್ಕಾಗಿ ನಿರ್ಮಾಣ ಮಾಡಲಾಯಿತು. ಹೆಚ್ಚುತ್ತಿರುವ ಜನಸಂಖ್ಯೆ ಹಾಗೂ ಅಂತರ್ಜಲ ಮಟ್ಟದ ಕೊರತೆಯಿಂದಾಗಿ ಕಾವೇರಿ ನದಿ ನೀರಿನ ಪೂರೈಕೆಗೆ ಒತ್ತಡ ಹೆಚ್ಚುತ್ತಿದೆ. ಹೀಗಾಗಿ ಶೀಘ್ರವೇ ಮೇಕೆದಾಟು ಯೋಜನೆ ಪೂರ್ಣಗೊಳಿಸುವ ಅವಶ್ಯಕತೆಯಿದೆ. ಪ್ರಸ್ತಾವಿತ ಮೇಕೆದಾಟು ಯೋಜನೆಯಿಂದ ಕನಕಪುರ, ಮಳವಳ್ಳಿ, ಮತ್ತು ಕೊಳ್ಳೇಗಾಲ ತಾಲೂಕಿನ ಜನತೆಗೂ ಕುಡಿಯುವ ನೀರಿನ ಪೂರೈಕೆಯಾಗಲಿದೆ ಎಂದು ಸಾತನೂರಿನ ಹರೀಶ್ ಬಾಬು ಎಂಬುವರು ತಿಳಿಸಿದ್ದಾರೆ,
ರಾಜಕೀಯ ಪಕ್ಷಗಳು ಹಾಗೂ ಅಧಿಕಾರಕ್ಕೆ ಬರುವ ಹೊಸ ಸರ್ಕಾರ ಯೋಜನೆಯನ್ನು ಚುರುಕುಗೊಳಿಸುವ ನಿಟ್ಟಿನಲ್ಲಿ ಕೆಲಸ ಮಾಡಬೇಕು ಎಂದು ರೈತ ಹಿತರಕ್ಷಣಾ ಸಮಿತಿ ಅಧ್ಯಕ್ಷ ಜಿ, ಮಾದೇಗೌಡ ಹೇಳಿದ್ದಾರೆ. ಮುಂದಿನ ಶತಮಾನದ  ಪೀಳಿಗೆಗೆ ಈ ಯೋಜನೆಯಿಂದ ಸಹಾಯವಾಗುತ್ತದೆಂದು ಅವರು ತಿಳಿಸಿದ್ದಾರೆ. 
ಮೇಕೆದಾಟು ಯೋಜನೆ ವಿರುದ್ದ ತಮಿಳುನಾಡು ತನ್ನ ಕಾನೂನು ಹೋರಾಟ ಮುಂದುವರಿಸಲಿ, ಆದರೆ ಮೇಕೆದಾಡು ಯೋಜನೆಯನ್ನು ಅದು ಒಪ್ಪಿಕೊಳ್ಳಲೇಬೇಕು ಎಂದು ಅವರು ಹೇಳಿದ್ದಾರೆ, ಶತಮಾನಗಳಷ್ಟು ಹಿಂದಿನ ನೀರು ಹಂಚಿಕೆ ವಿವಾದವನ್ನು ನ್ಯಾಯಾಲಯ ಶೀಘ್ರವೇ ಬಗೆಹರಿಸಬೇಕು, ಪ್ರಧಾನಿ ಮೋದಿ ಮಧ್ಯ ಪ್ರವೇಶಿಸಬೇಕು ಎಂದು ರಾತ ಹೋರಾಟಗಾರ  ಸೋಮಶೇಖರ್ ಆಗ್ರಹಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com