ಬೆಂಗಳೂರು: ಕಾವೇರಿ ವಿವಾದಕ್ಕೆ ಸಂಬಂಧಿಸಿದಂತೆ ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಆಗ್ರಹಿಸಿ ಇಂದು ತಮಿಳುನಾಡು ರಾಜ್ಯದ್ಯಂತ ಬಂದ್ ಆಚರಿಸಲಾಗುತ್ತಿದ್ದು, ಈ ಹಿನ್ನಲೆಯಲ್ಲಿ ರಾಜ್ಯದಿಂದ ತಮಿಳುನಾಡಿಗೆ ತೆರಳುವ ಎಲ್ಲಾ ಕೆಎಸ್ಆರ್'ಟಿಸಿ ಬಸ್ ಸೇರಿದಂತೆ ಸರಕು ಸಾಗಣೆ ಲಾರಿಗಳು, ವಾಣಿಜ್ಯ ವಾಹನಗಳು, ಪ್ರವಾಸಿ ವಾಹನಗಳು ಹಾಗೂ ಎಲ್ಲಾ ರೀತಿಯ ವಾಹನಗಳ ಸಂಚಾರಗಳನ್ನು ಸ್ಥಗಿತಗೊಳಿಸಲಾಗಿದೆ ಎಂದು ತಿಳಿದುಬಂದಿದೆ.