ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಮೇ ಮೊದಲ ವಾರದಲ್ಲಿ ಪ್ರಕಟ: ತನ್ವೀರ್ ಸೇಠ್

ಈ ಸಾಲಿನ ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಮೇ ಮೊದಲ ವಾರದಲ್ಲಿ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್‌ ಸೇಠ್‌ ತಿಳಿಸಿದ್ದಾರೆ.
ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಮೇ ಮೊದಲ ವಾರದಲ್ಲಿ ಪ್ರಕಟ: ತನ್ವೀರ್ ಸೇಟ್
ಎಸ್ಎಸ್ಎಲ್ ಸಿ ಪರೀಕ್ಷಾ ಫಲಿತಾಂಶ ಮೇ ಮೊದಲ ವಾರದಲ್ಲಿ ಪ್ರಕಟ: ತನ್ವೀರ್ ಸೇಟ್
Updated on: 
ಬೆಂಗಳೂರು: ಈ ಸಾಲಿನ ಎಸ್ಎಸ್ಎಲ್ ಸಿ  ಪರೀಕ್ಷಾ ಫಲಿತಾಂಶ ಮೇ ಮೊದಲ ವಾರದಲ್ಲಿ ಪ್ರಕಟವಾಗಲಿದೆ ಎಂದು ಪ್ರಾಥಮಿಕ ಹಾಗೂ ಪ್ರೌಢಶಿಕ್ಷಣ ಸಚಿವ ತನ್ವೀರ್‌ ಸೇಠ್‌ ತಿಳಿಸಿದ್ದಾರೆ.
ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಶುಕ್ರವಾರ ಮುಕ್ತಾಯಗೊಂಡಿದ್ದು ಇದಾಗಲೇ ಮೌಲ್ಯಮಾಪನಕ್ಕೆ ಸಿದ್ದತೆ ಮಾಡಿಕೊಳ್ಳಲಾಗಿದೆ.ಮೇ ಮೊದಲವಾರ ಫಲಿತಾಂಶ ಪ್ರಕಟಗೊಳ್ಳಲಿದೆ ಎಂದು ಸಚಿವ ಸೇಠ್‌ ಹೇಳಿದರು.
ತಮ್ಮ ಕಛೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ್ದ ಸೇಠ್‌ ಈ ಸಾಲಿನ ಪರೀಕ್ಷೆ ನಡೆದಿರುವ ರೀತಿ  ತೃಪ್ತಿ ತಂದಿದೆ. ಮಕ್ಕಳನ್ನು ಪರೀಕ್ಷಾ ಭಯದಿಂದ ದೂರ ಮಾಡುವ ಸಲುವಾಗಿ ಸಾಕಷ್ಟು ಕ್ರಮ ತೆಗೆದುಕೊಳ್ಳಲಾಗಿದೆ. ಈ ಸಾಲಿನಲ್ಲಿ ಒಟ್ಟು 33 ವಿಷಯಗಳಲ್ಲಿ ಪರೀಕ್ಷೆ ನಡೆದಿದೆ ಎಂದು ಹೇಳಿದ್ದಾರೆ.
ಮೇ  15 ರಂದು ರಾಜ್ಯದಲ್ಲಿ ವಿಧಾನ ಸಭೆ ಚುನಾವಣೆ ನಡೆಯುವ ಕಾರಣ ಚುನಾವಣೆಗೆ ಮುನ್ನವೇ ಫಲಿತಾಂಶ ಘೋಷಣೆಗೆ  ಚಿಂತನೆ ನಡೆಸಲಾಗಿದೆ ಎಂದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com