ನೀಟ್ ಪಿಜಿ; ಸುಪ್ರೀಂ ಕೋರ್ಟ್ ಆದೇಶದ ಕುರಿತು ಸ್ಪಷ್ಟನೆ ಕೇಳಿದ ರಾಜ್ಯ ಸರ್ಕಾರ

ಸ್ನಾತಕೋತ್ತರ ವೈದ್ಯಕೀಯ ಸೀಟುಗಳ ಪ್ರವೇಶಕ್ಕೆ 10 ವರ್ಷಗಳ ವಾಸಸ್ಥಾನ ನಿಯಮ ಕಡ್ಡಾಯ ಎಂಬ ರಾಜ್ಯ...
ಸುಪ್ರೀಂ ಕೋರ್ಟ್
ಸುಪ್ರೀಂ ಕೋರ್ಟ್

ಬೆಂಗಳೂರು; ಸ್ನಾತಕೋತ್ತರ ವೈದ್ಯಕೀಯ ಸೀಟುಗಳ ಪ್ರವೇಶಕ್ಕೆ 10 ವರ್ಷಗಳ ವಾಸಸ್ಥಾನ ನಿಯಮ ಕಡ್ಡಾಯ ಎಂಬ ರಾಜ್ಯ ಸರ್ಕಾರದ ಅಧಿಸೂಚನೆ ಕುರಿತು ಸುಪ್ರೀಂ ಕೋರ್ಟ್ ಆದೇಶದ ಕುರಿತು ಸ್ಪಷ್ಟನೆ ಕೋರಿ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆ ನಿರ್ಧರಿಸಿದೆ.

ಸ್ನಾತಕೋತ್ತರ ವೈದ್ಯಕೀಯ ಕೋರ್ಸ್ ಗಳು ಮತ್ತು ಸರ್ಕಾರಿ ಕೋಟಾದಡಿ ವೈದ್ಯಕೀಯ ಮತ್ತು ದಂತ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ವಿದ್ಯಾರ್ಥಿಗಳು 10 ವರ್ಷ ಕಡ್ಡಾಯವಾಗಿ ರಾಜ್ಯದಲ್ಲಿ ವಾಸವಾಗಿರಬೇಕೆಂದು ಕರ್ನಾಟಕ ಹೊರಡಿಸಿರುವ ಅಧಿಸೂಚನೆ ಅಮಾನ್ಯವಾಗಿದೆ ಎಂದು ಮೊನ್ನೆ ಬುಧವಾರ ಸುಪ್ರೀಂ ಕೋರ್ಟ್ ಹೇಳಿತ್ತು. ಈ ಸಂಬಂಧ ರಾಜ್ಯ ವೈದ್ಯಕೀಯ ಶಿಕ್ಷಣ ಇಲಾಖೆ ಅಧಿಕಾರಿಗಳು ನಿನ್ನೆ ಸಭೆ ನಡೆಸಿತ್ತು. ಕಾನೂನು ಸಲಹೆ ಪಡೆದ ನಂತರ ಈ ಕುರಿತು ಸ್ಪಷ್ಟನೆಗೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ನಿರ್ಧರಿಸಿದೆ.

2018-19ನೇ ಸಾಲಿನ ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ 11,433 ಅಭ್ಯರ್ಥಿಗಳು ಕೌನ್ಸೆಲಿಂಗ್ ಗೆ ದಾಖಲಾತಿ ಮಾಡಿಕೊಂಡಿದ್ದಾರೆ. ಈ ಅಭ್ಯರ್ಥಿಗಳ ದಾಖಲಾತಿ ಪರಿಶೀಲನೆ ಪ್ರಕ್ರಿಯೆ ಕೂಡ ಮುಗಿದಿದೆ. ಈ ವರ್ಷ 2,275 ವೈದ್ಯಕೀಯ ಮತ್ತು 909 ದಂತ ವೈದ್ಯಕೀಯ ಸೀಟುಗಳು ಲಭ್ಯವಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com