'ರೋಹಿಣಿ ಸಿಂಧೂರಿಯವರು ಉದ್ದೇಶ ಪೂರ್ವಕವಾಗಿ ನನ್ನ ವಿರುದ್ಧ ನಡೆದುಕೊಳ್ಳುತ್ತಿದ್ದಾರೆ. ತಕ್ಷಣವೇ ಜಿಲ್ಲಾಧಿಕಾರಿಯನ್ನು ಬದಲಿಸಬೇಕು ಮತ್ತು ಅವರ ವಿರುದ್ಧ ತನಿಖೆ ನಡೆಸಬೇಕು. ಜಿಲ್ಲಾಧಿಕಾರಿ ನೀತಿ ಚುನಾವಣಾ ನೀತಿ ಸಂಹಿತೆಯನ್ನು ದುರುಪಯೋಗಪಡಿಸಿಕೊಂಡಿದ್ದಾರೆ. ಅವರ ಕ್ರಮದ ಬಗ್ಗೆ ಸರಿಯಾಗಿ ಕ್ರಮ ಕೈಗೊಳ್ಳಬೇಕು ಎಂದು ಮುಖ್ಯಚುನಾವಣಾಧಿಕಾರಿ ಸಂಜೀವ್ ಕುಮಾರ್ಗೆ ಸಚಿವ ಮಂಜು ದೂರು ನೀಡಿದ್ದಾರೆ.