ಆಗಾಗ ಬಂದ್ ಗೆ ಕರೆ ನೀಡುವವರ ವಿರುದ್ಧ ಕ್ರಮ ಕೈಗೊಳ್ಳಿ: ಕರ್ನಾಟಕ ಹೈಕೋರ್ಟ್

ನ್ಯಾಯಾಲಯ ಬಂದ್ ನ್ನು ನಿಷೇಧಿಸಿದ್ದರೂ ಕೂಡ ಆಗಾಗ ಬಂದ್ ಗೆ ಕರೆ ನೀಡುವವರ ವಿರುದ್ಧ ರಾಜ್ಯ ...
ಕರ್ನಾಟಕ ಹೈಕೋರ್ಟ್
ಕರ್ನಾಟಕ ಹೈಕೋರ್ಟ್

ಬೆಂಗಳೂರು: ನ್ಯಾಯಾಲಯ ಬಂದ್ ನ್ನು ನಿಷೇಧಿಸಿದ್ದರೂ ಕೂಡ ಆಗಾಗ ಬಂದ್ ಗೆ ಕರೆ ನೀಡುವವರ ವಿರುದ್ಧ ರಾಜ್ಯ ಸರ್ಕಾರ ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಕುರಿತು ಇಂದು ಸಂಜೆಯೊಳಗೆ ಪ್ರತಿಕ್ರಿಯಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚಿಸಿದೆ.

ಮುಖ್ಯ ನ್ಯಾಯಮೂರ್ತಿ ದಿನೇಶ್ ಮಹೇಶ್ವರಿ ಮತ್ತು ನ್ಯಾಯಮೂರ್ತಿ ಬಿ.ಎಂ,ಶ್ಯಾಮ್ ಪ್ರಸಾದ್ ಅವರನ್ನೊಳಗೊಂಡ ವಿಭಾಗೀಯ ಪೀಠ, ಸಾಫ್ಟ್ ವೇರ್ ಡೆವೆಲಪರ್ ಹೆಚ್ ಎನ್ ರಮೇಶ್, ಅಡ್ವೊಕೇಟ್ ರಾಘವೇಂದ್ರ ಮತ್ತಿತರರು ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿ ಈ ಆದೇಶ ನೀಡಿದೆ.

ಕಾವೇರಿ ಜಲ ವಿವಾದಕ್ಕೆ ಸಂಬಂಧಪಟ್ಟಂತೆ ನಾಳೆ ಕರ್ನಾಟಕ ಬಂದ್ ಗೆ ಕನ್ನಡ ಚಳವಳಿ ವಾಟಾಳ್ ಪಕ್ಷದ ಅಧ್ಯಕ್ಷ ವಾಟಾಳ್ ನಾಗರಾಜ್ ಕರೆ ನೀಡಿದ್ದರು. ಆದರೆ ಕಾವೇರಿ ಜಲ ವಿವಾದದ ಬಗ್ಗೆ ಸುಪ್ರೀಂ ಕೋರ್ಟ್ ವಿಚಾರಣೆ ಕೈಗೆತ್ತಿಕೊಂಡ ಹಿನ್ನೆಲೆಯಲ್ಲಿ ಬಂದ್ ಕರೆಯನ್ನು ಹಿಂತೆಗೆದುಕೊಂಡಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com