ಕಾವೇರಿ ವಿವಾದ; ಪ್ರಧಾನಿ ಮೋದಿ ಟೀಕಿಸುವ ಭರದಲ್ಲಿ ರಮ್ಯಾ ಎಡವಟ್ಟು

ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಅವರು ಮಾಡಿರುವ ಟ್ವೀಟ್ ವೊಂದು ಇದೀಗ ವಿವಾದಕ್ಕೆ ಕಾರಣವಾಗಿದೆ...
ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ
ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ
Updated on: 
ಬೆಂಗಳೂರು: ಪ್ರಧಾನಮಂತ್ರಿ ನರೇಂದ್ರ ಮೋದಿಯವರನ್ನು ಟೀಕಿಸುವ ಭರದಲ್ಲಿ ಕಾಂಗ್ರೆಸ್ ಪಕ್ಷದ ಸಾಮಾಜಿಕ ಜಾಲತಾಣದ ಮುಖ್ಯಸ್ಥೆ ರಮ್ಯಾ ಅವರು ಮಾಡಿರುವ ಟ್ವೀಟ್ ವೊಂದು ಇದೀಗ ವಿವಾದಕ್ಕೆ ಕಾರಣವಾಗಿದೆ. 
ಪ್ರಧಾನಿ ಭೇಟಿ ವಿರೋಧಿಸಿ ತಮಿಳುನಾಡಿನಲ್ಲಿ ಗುರುವಾರ ನಡೆದ ಗೋ ಬ್ಯಾಕ್ ಮೋದಿ ಹೋರಾಟ ಬೆಂಬಲಿಸಿ ಟ್ವೀಟ್ ಮಾಡುವ ಮೂಲಕ ಕನ್ನಡಿಗರ ವಿರೋಧಿ ನಿಲುವು ತಳೆದ ಆರೋಪಕ್ಕೆ ನಟಿ ರಮ್ಯಾ ಅವರು ಗುರಿಯಾಗಿದ್ದಾರೆ. 
ಕಾವೇರಿ ನಿರ್ವಹಣಾ ಮಂಡಳಿ ರಚಿಸುವಂತೆ ಆಗ್ರಹಿಸಿ ಕೇಂದ್ರ ಸರ್ಕಾರದ ವಿರುದ್ಧ ತಮಿಳುನಾಡಿನಲ್ಲಿ ತೀವ್ರ ಪ್ರತಿಭಟನೆಗಳು ನಡೆಯುತ್ತಿವೆ. ಇದರ ನಡುವೆಯೇ ಪ್ರಧಾನಿ ಮೋದಿಯವರು ತಮಿಳುನಾಡು ರಾಜ್ಯಕ್ಕೆ ಭೇಟಿ ನೀಡಿದ್ದರು. 
ಈ ವೇಳೆ ಕೆಲವರು ಕಪ್ಪು ಬಾವುಟ ಪ್ರದರ್ಶಿಸಿ ಗೋ ಬ್ಯಾಕ್ ಮೋದಿ ಎಂಬ ಘೋಷಣೆಗಳೊಂದಿಗೆ ಪ್ರತಿಭಟನೆ ನಡೆಸಿದ್ದರು. ಈ ಸುದ್ದಿಯನ್ನು ಮುಂದಿಟ್ಟುಕೊಂಡು ರಮ್ಯಾ ಅವರು ಗೋ ಬ್ಯಾಕ್ ಮೋದಿ ಎಂಬ ಹ್ಯಾಷ್ ಟ್ಯಾಗ್ ಸೃಷ್ಟಿಸಿ ಗಟ್ಟಿ ಮತ್ತು ಸ್ಪಷ್ಟ ಧ್ವನಿಯಲ್ಲಿ ವಿರೋಧಿಸಿ ಎಂಬ ಅರ್ಥದಲ್ಲಿ ಟ್ವೀಟ್ ಮಾಡಿದ್ದರು.
ರಮ್ಯಾ ಅವರ ಎಡವಟ್ಟಿನಿಂದಾಗಿ ಅವರೀಗ ಕಾವೇರಿ ಹೋರಾಟದಲ್ಲಿ ತಮಿಳುನಾಡು ಬೆಂಬಲಿಸಿದ ಆರೋಪಕ್ಕೆ ಗುರಿಯಾಗಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com