ಇನ್ಮುಂದೆ ರಾಜೀವ್ ಗಾಂಧಿ ವಿವಿ ವಿದ್ಯಾರ್ಥಿಗಳು ಗಿಡ ನೆಟ್ಟು ಪೋಷಿಸುವುದು ಕಡ್ಡಾಯ

ಮುಂದಿನ ಶೈಕ್ಷಣಿಕ ವರ್ಷದಿಂದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಅಧೀನ ...
ರಾಜೀವ್ ಗಾಂಧಿ ವಿಶ್ವವಿದ್ಯಾಲಯ
ರಾಜೀವ್ ಗಾಂಧಿ ವಿಶ್ವವಿದ್ಯಾಲಯ

ಬೆಂಗಳೂರು: ಮುಂದಿನ ಶೈಕ್ಷಣಿಕ ವರ್ಷದಿಂದ ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಅಧೀನ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ವಿದ್ಯಾರ್ಥಿಗಳು ಗಿಡವೊಂದನ್ನು ನೆಡಬೇಕು.

ವಿಶ್ವವಿದ್ಯಾಲಯ ಮಟ್ಟದಲ್ಲಿ ಈ ಯೋಜನೆಯ ನಿರ್ಧಾರ ತೆಗೆದುಕೊಳ್ಳಲಾಗಿದ್ದು ಅಧೀನದ ಎಲ್ಲಾ ಕಾಲೇಜುಗಳಿಗೆ ತಿಳಿಸಲಾಗಿದೆ. ಅದರಲ್ಲಿ ಮೆಡಿಕಲ್, ನರ್ಸಿಂಗ್ ಮತ್ತು ಫಾರ್ಮಸಿ ಕಾಲೇಜುಗಳು ಕೂಡ ಸೇರಿವೆ. ಶಿಕ್ಷಣ ಸಂಸ್ಥೆಗಳು ಒಂದೊಂದು ಗಿಡಗಳನ್ನು ಪ್ರತಿ ವಿದ್ಯಾರ್ಥಿಗೆ ನೀಡಿ ಅದನ್ನು ಕಾಲೇಜಿನ ಕ್ಯಾಂಪಸ್ ನಲ್ಲಿ ನೆಡುವಂತೆ ಹೇಳಬೇಕು ಎನ್ನಲಾಗಿದೆ.

ಗಿಡವನ್ನು ನೆಟ್ಟುಬಿಟ್ಟರೆ ಅಲ್ಲಿಗೆ ಕೆಲಸ ಮುಗಿಯುವುದಿಲ್ಲ. ಆ ಗಿಡದ ಉಸ್ತುವಾರಿಯನ್ನು ನೋಡಿಕೊಂಡು ಆರೈಕೆ ಮಾಡಿಕೊಂಡಿರಬೇಕು. ಆ ಕಾಲೇಜಿನಲ್ಲಿ ಶಿಕ್ಷಣ ಮುಗಿಸಿ ಹೋಗುವವರೆಗೆ ಆ ಗಿಡದ ಉಸ್ತುವಾರಿ ಸಂಬಂಧಪಟ್ಟ ವಿದ್ಯಾರ್ಥಿಯದ್ದು. ಕೊನೆಯಲ್ಲಿ ಆ ಗಿಡದ ಜೊತೆಗೆ ವಿದ್ಯಾರ್ಥಿ ಫೋಟೋ ತೆಗೆದುಕೊಳ್ಳಬೇಕು, ಅದಕ್ಕೆ ವಿಶ್ವವಿದ್ಯಾಲಯ ಪ್ರಮಾಣಪತ್ರ ನೀಡುತ್ತದೆ ಎಂದು ರಾಜೀವ್ ಗಾಂಧಿ ವಿಶ್ವವಿದ್ಯಾಲಯದ ಉಪ ಕುಲಪತಿ ಉಸ್ತುವಾರಿ ಡಾ.ಎಂ.ಕೆ.ರಮೇಶ್ ಹೇಳಿದ್ದಾರೆ.

ರಾಜ್ಯ ಉನ್ನತ ಶಿಕ್ಷಣ ಮಂಡಳಿಯ ನಿರ್ದೇಶನದಂತೆ ಈ ಕ್ರಮ ಅನುಸರಿಸಲಾಗುತ್ತಿದೆ. ರಾಜ್ಯದ ಎಲ್ಲಾ ಉನ್ನತ ಶಿಕ್ಷಣ ಸಂಸ್ಥೆಗಳು ಮತ್ತು ವಿಶ್ವವಿದ್ಯಾಲಯಗಳು ಈ ಕ್ರಮವನ್ನು ಅನುಸರಿಸಬೇಕೆಂದು ಹೇಳಿದೆ.

ಈ ವಿಧಾನವನ್ನು ಆರಂಭಿಸಿದ ಕೀರ್ತಿ ತುಮಕೂರಿನ ಸಿದ್ಧಾರ್ಥ ವಿಶ್ವವಿದ್ಯಾಲಯಕ್ಕೆ ಸಲ್ಲುತ್ತದೆ. ಇದು ಎರಡು ವರ್ಷಗಳ ಹಿಂದೆ ಈ ಪದ್ಧತಿಯನ್ನು ಅನುಸರಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com