ಬೆಂಗಳೂರು: ಮುಂದಿನ ಎರಡು-ಮೂರು ದಿನಗಳಲ್ಲಿ ಮಳೆ ಸುರಿಯುವ ಸಾಧ್ಯತೆ

ಕಳೆದ ಕೆಲ ದಿನಗಳಿಂದ ಬಿಸಿಲಿನ ಧಗೆಗೆ ಬಳಲುತ್ತಿರುವವರಿಗೆ ಕೊಂಚ ನಿರಾಳ ಸಿಗುವ....
ಚುನಾವಣಾ ನಿಮಿತ್ತ ಕರ್ತವ್ಯದಲ್ಲಿರುವ ಸಶಸ್ತ್ರ ಸೀಮಾ ಬಲ ಸಿಬ್ಬಂದಿ ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ಎಳನೀರು ಸೇವಿಸುತ್ತಿರುವುದು
ಚುನಾವಣಾ ನಿಮಿತ್ತ ಕರ್ತವ್ಯದಲ್ಲಿರುವ ಸಶಸ್ತ್ರ ಸೀಮಾ ಬಲ ಸಿಬ್ಬಂದಿ ಬೆಂಗಳೂರಿನ ಮೆಜೆಸ್ಟಿಕ್ ನಲ್ಲಿ ಎಳನೀರು ಸೇವಿಸುತ್ತಿರುವುದು
ಬೆಂಗಳೂರು: ಕಳೆದ ಕೆಲ ದಿನಗಳಿಂದ ಬಿಸಿಲಿನ ಧಗೆಗೆ ಬಳಲುತ್ತಿರುವವರಿಗೆ ಕೊಂಚ ನಿರಾಳ ಸಿಗುವ ಸಾಧ್ಯತೆಯಿದೆ. ಬೆಂಗಳೂರು ಸೇರಿದಂತೆ ಕರಾವಳಿ, ಒಳನಾಡು ಭಾಗಗಳಲ್ಲಿ ಗುಡುಗು ಸಹಿತ ಮುಂದಿನ ಮೂರು ದಿನಗಳಲ್ಲಿ ಮಳೆ ಸುರಿಯುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಸುಮಾರು 30 ಡಿಗ್ರಿ ಸೆಲ್ಸಿಯಸ್ ಸುತ್ತಮುತ್ತ ತಾಪಮಾನವಿದೆ.
ರಭಸ ಗಾಳಿಯಿಂದ ಕೂಡಿದ ಗುಡುಗು ಸಹಿತ ಧಾರಾಕಾರ ಮಳೆ ಬೆಂಗಳೂರು ಸೇರಿದಂತೆ ಒಳನಾಡು ಭಾಗಗಳಲ್ಲಿ ಸುರಿಯುವ ಸಾಧ್ಯತೆಯಿದೆ. ಮುಂದಿನ ಎರಡು ದಿನಗಳಲ್ಲಿ ಬೆಂಗಳೂರಿನಲ್ಲಿ ಮಳೆ ಸುರಿಯಬಹುದು ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ. ಇಲ್ಲಿ ಪ್ರಸ್ತುತ ಕನಿಷ್ಠ 22 ಡಿಗ್ರಿ ಸೆಲ್ಸಿಯಸ್ ಮತ್ತು ಗರಿಷ್ಠ 35 ಡಿಗ್ರಿ ಸೆಲ್ಸಿಯಸ್ ತಾಪಮಾನವಿದೆ.
ನಿನ್ನೆ ಬೆಳಗಾವಿ, ಶಿವಮೊಗ್ಗ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಮಳೆ ಸುರಿದಿತ್ತು. ಈ ಭಾಗಗಳಲ್ಲಿ ಮತ್ತು ಬೆಂಗಳೂರು ಸುತ್ತಮುತ್ತ ಮುಂದಿನ ಎರಡು ದಿನಗಳಲ್ಲಿ ಮಳೆ ಸುರಿಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com