ಸಂಜೆಯಾಗುತ್ತಲೇ ನಗರದಾದ್ಯಂತ ಗುಡುಗು ಸಹಿತ ಭಾರೀ ಪ್ರಮಾಣದಲ್ಲಿ ಮಳೆಯಾಗಿದ್ದು, ನಗರದ ಬಹುತೇಕ ಪ್ರದೇಶಗಳಲ್ಲಿ ಟ್ರಾಫಿಕ್ ಜಾಮ್ ಆಗಿದೆ. ಮೇಖ್ರಿ ಸರ್ಕಲ್, ಹೆಬ್ಬಾಳ, ಮೆಜಸ್ಟಿಕ್ ಬಳಿ ಟ್ರಾಫಿಕ್ ಜಾಮ್‌ನಿಂದ ವಾಹನ ಸವಾರರು ಪರದಾಡುವಂತಾಗಿದೆ. ಶಿವಾಜಿನಗರ, ಶಾಂತಿನಗರ, ಶಿವಾನಂದ ಸರ್ಕಲ್, ಮೆಜೆಸ್ಟಿಕ್, ಮಲ್ಲೇಶ್ವರಂ, ಕೆಆರ್ ಮಾರ್ಕೆಟ್, ಹೆಬ್ಬಾಳ ಸೇರಿ ಹಲವೆಡೆ ಸುರಿದ ಮಳೆಯಿಂದಾಗಿ ಸಂಚಾರ ವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ. ಜನರು ಮನೆ ಸೇರಲು ಪರದಾಡುವಂತಾಗಿತ್ತು.