ಹಾಸನದ ನೂತನ ಜಿಲ್ಲಾಧಿಕಾರಿಯಾಗಿ ಡಿ.ರಂದೀಪ್‌ ಅಧಿಕಾರ ಸ್ವೀಕಾರ

ಹಾಸನ ಜಿಲ್ಲಾಧಿಕಾರಿ ವರ್ಗಾವಣೆ ಸಂಘರ್ಷಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಡಿ.ರಂದೀಪ್ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ಹಾಸನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ರಂದೀಪ್‌
ಹಾಸನ ಜಿಲ್ಲಾಧಿಕಾರಿಯಾಗಿ ಅಧಿಕಾರ ಸ್ವೀಕರಿಸಿದ ಡಿ.ರಂದೀಪ್‌
Updated on
ಹಾಸನ: ಹಾಸನ ಜಿಲ್ಲಾಧಿಕಾರಿ ವರ್ಗಾವಣೆ ಸಂಘರ್ಷಕ್ಕೆ ಕೊನೆಗೂ ತೆರೆ ಬಿದ್ದಿದ್ದು, ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ  ಡಿ.ರಂದೀಪ್ ಅವರು ಮಂಗಳವಾರ ಅಧಿಕಾರ ವಹಿಸಿಕೊಂಡಿದ್ದಾರೆ.
ರಂದೀಪ್‌ ಎರಡು ತಿಂಗಳ ಹಿಂದೆಯೇ ಹಾಸನಕ್ಕೆ ವರ್ಗವಾಗಿದ್ದರು. ಈ ಹಿಂದೆ ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ರಾಜ್ಯ ಸರ್ಕಾರ ವರ್ಗಾವಣೆ ಮಾಡಿತ್ತು. ಆದರೆ ಇದನ್ನು ಪ್ರಶ್ನಿಸಿ ರೋಹಿಣಿ ಸಿಂಧೂರಿ ಅವರು ಸಿಎಟಿ ಮತ್ತು ಹೈ‌ಕೋರ್ಟ್ ಮೊರೆ ಹೋಗಿದ್ದರು. ಇದೀಗ ಸಿಎಟಿ ತೀರ್ಪು ಹೊರಬಿದ್ದಿದ್ದು, ಸರ್ಕಾರದ ಆದೇಶವನ್ನು ಎತ್ತಿ ಹಿಡಿದಿದೆ. 
ಹೀಗಾಗಿ ರೋಹಿಣಿ ಸಿಂಧೂರಿ ಅವರ ವರ್ಗಾವಣೆ ಅಧಿಕೃತವಾಗಿದ್ದು, ಇಂದು ನೂತನ ಜಿಲ್ಲಾಧಿಕಾರಿಯಾಗಿ ಡಿ.ರಂದೀಪ್‌ ಅಧಿಕಾರ ಸ್ವೀಕಾರ ಮಾಡಿದ್ದಾರೆ. ನೂತನ ಡಿಸಿ ರಂದೀಪ್ ಅವರು ಇಂದು ಹಾಸನಾಂಬೆ ದೇವಿಗೆ ಪೂಜೆ ಸಲ್ಲಿಸಿದ ನಂತರ ಅಧಿಕಾರ ಸ್ವೀಕರಿಸಿದರು. ರೋಹಿಣಿ ಸಿಂಧೂರಿ ಅಧಿಕಾರ ಹಸ್ತಾಂತರಕ್ಕೆ ಬರಲಿಲ್ಲ. ಹೀಗಾಗಿ ಸಹಾಯಕ ಡಿಸಿ ಪೂರ್ಣಿಮಾ ಅವರಿಂದ ರಂದೀಪ್‌ ಅಧಿಕಾರ ಸ್ವೀಕರಿಸಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com