ಕೋಲಾರ: ಕೆರೆಯಲ್ಲಿ ಮುಳುಗಿ ಇಬ್ಬರು ಸಹೋದರಿಯರ ಸಾವು, ಓರ್ವ ಬಾಲಕಿ ರಕ್ಷಣೆ

ಬಿಸಿಲ ಬೇಗೆಯಿಂದಾಗಿ ಕೆರೆಯಲ್ಲಿ ಆಟವಾಡಲು ಹೋಗಿದ್ದ ಮೂವರು ಬಾಲಕಿಯರ ಪೈಕಿ ಇಬ್ಬರು ಸಾವನ್ನಪ್ಪಿ, ಓರ್ವ ಬಾಲಕಿಯ ರಕ್ಷಣೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on: 
ಕೋಲಾರ: ಬಿಸಿಲ ಬೇಗೆಯಿಂದಾಗಿ ಕೆರೆಯಲ್ಲಿ ಆಟವಾಡಲು ಹೋಗಿದ್ದ ಮೂವರು ಬಾಲಕಿಯರ ಪೈಕಿ ಇಬ್ಬರು ಸಾವನ್ನಪ್ಪಿ, ಓರ್ವ ಬಾಲಕಿಯ ರಕ್ಷಣೆ ಮಾಡಿರುವ ಘಟನೆ ಕೋಲಾರದಲ್ಲಿ ನಡೆದಿದೆ.
ಕೋಲಾರದ ಹೊಲಾಳಿ ಗ್ರಾಮದ ಕೆರೆಯಲ್ಲಿ ಈ ದುರಂತ ನಡೆದಿದ್ದು, ಮೃತರನ್ನು ಭವ್ಯ (13) ಮತ್ತು ಶಿಲ್ಪಾ (10) ಎಂದು ಗುರುತಿಸಲಾಗಿದ್ದು, ಇಬ್ಬರೂ ಇದೇ ಹೊಲಾಳಿ ಗ್ರಾಮದ ನಿವಾಸಿಗಳಾಗಿದ್ದಾರೆ. ಇಬ್ಬರು ಸಹೋದರಿಯರು ಎಂದು ತಿಳಿದುಬಂದಿದೆ. ಮತ್ತೋರ್ವ ಬಾಲಕಿಯಲ್ಲಿ ಮಾಧವಿ ಎಂದು ಗುರುತಿಸಲಾಗಿದ್ದು, ನೀರಿನಲ್ಲಿ ಮುಳುಗುತ್ತಿದ್ದ ಆಕೆಯನ್ನು ಸ್ಥಳೀಯರು ರಕ್ಷಣೆ ಮಾಡಿದ್ದಾರೆ.
ಮೂವರು ಬಾಲಕಿಯರು ಮನೆಯವರಿಗೆ ತಿಳಿಸದೇ ನೀರಿನಲ್ಲಿ ಆಟವಾಡಲು ಕೆರೆಗೆ ಆಗಮಿಸಿದ್ದರು. ಈ ವೇಳೆ ದುರಂತ ಸಂಭವಿಸಿದ್ದು, ಬಾಲಕಿಯರು ನೀರಿಗೆ ಇಳಿದ ಸಂದರ್ಭದಲ್ಲಿ ನೀರಿನಲ್ಲಿ ತೀವ್ರ ಸೆಳೆತ ಇತ್ತು ಎಂದು ಗ್ರಾಮಸ್ಥರು ಮಾಹಿತಿ ನೀಡಿದ್ದಾರೆ. ಕೋಲಾರ ಗ್ರಾಮಾಂತರ ಠಾಣೆಯಲ್ಲಿ ಈ ಸಂಬಂದ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com