ಕಾವೇರಿ ನಿರ್ವಹಣಾ ಮಂಡಳಿ ರಚನೆ ಅಸಂವಿಧಾನಿಕ: ಪ್ರಧಾನಿ ಮೋದಿಗೆ ಪತ್ರ ಬರೆದ ಸಿಎಂ ಸಿದ್ದರಾಮಯ್ಯ

ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಬೇಕೆಂಬ ತಮಿಳನಾಡು ರಾಜ್ಯದ ಬೇಡಿಕೆಯನ್ನು ಪ್ರಬಲವಾಗಿ ವಿರೋಧಿಸಿರುವ ರಾಜ್ಯ ಸರ್ಕಾರ, ಕಾವೇರಿ ನಿರ್ವಹಣಾ ಮಂಡಳಿ ರಚನೆ ಸಂವಿಧಾನಾತ್ಮಕ ಕ್ರಮವಲ್ಲ ಎಂದು ಹೇಳಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದೆ...
ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ
ಬೆಂಗಳೂರು: ಕಾವೇರಿ ನಿರ್ವಹಣಾ ಮಂಡಳಿ ರಚನೆ ಮಾಡಬೇಕೆಂಬ ತಮಿಳನಾಡು ರಾಜ್ಯದ ಬೇಡಿಕೆಯನ್ನು ಪ್ರಬಲವಾಗಿ ವಿರೋಧಿಸಿರುವ ರಾಜ್ಯ ಸರ್ಕಾರ, ಕಾವೇರಿ ನಿರ್ವಹಣಾ ಮಂಡಳಿ ರಚನೆ ಸಂವಿಧಾನಾತ್ಮಕ ಕ್ರಮವಲ್ಲ ಎಂದು ಹೇಳಿ ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿದೆ. 
ಪ್ರಧಾನಮಂತ್ರಿ ನರೇಂದ್ರ ಮೋದಿಯವರಿಗೆ ಪತ್ರ ಬರೆದಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಕಾವೇರಿ ನಿರ್ವಹಣಾ ಮಂಡಳಿ ಐತೀರ್ಪಿನಲ್ಲಿ ನೀರು ನಿರ್ವಹಣಾ ಮಂಡಳಿ ರಚಿಸಬಹುದು ಎಂದು ಕೇವಲ ಶಿಫಾರಸು ರೂಪದಲ್ಲಿ ಹೇಳಿದೆಯೇ ವಿನಃ, ನಿರ್ದೇಶನವನ್ನು ನೀಡಿಲ್ಲ ಎಂದು ಖಚಿತಪಡಿಸಿದ್ದಾರೆ. 
ನ್ಯಾಯಮಂಡಳಿಯ ಈ ಶಿಫಾರಸ್ಸನ್ನು ಸುಪ್ರೀಂಕೋರ್ಟ್ ಫೆ.16ರಂದು ನೀಡಿರುವ ಆದೇಶದಲ್ಲಿ ಸಮರ್ಥಿಸಿಲ್ಲ. ಹೀಗಾಗಿ ಕಾವೇರಿ ನಿರ್ವಹಣಾ ಮಂಡಳಿ ರಚಿಸಬೇಕೆಂಬ ತಮಿಳುನಾಡು ಸರ್ಕಾರದ ಬೇಡಿಕೆಯು ನ್ಯಾಯಮಂಡಳಿ ಐತೀರ್ಪು ಮತ್ತು ಸುಪ್ರೀಂಕೋರ್ಟ್ ಪರಿಷ್ಕೃತ ತೀರ್ಪು ಜಾರಿಯ ಅಗತ್ಯಗಳನ್ನು ಮೀರುತ್ತದೆ ಎಂದು ತಿಳಿಸಿದ್ದಾರೆ. 
ಈ ರೀತಿಯ ಪ್ರಸ್ತಾವನೆಗಳು ಸಂವಿಧಾನ ಖಾತರಿಪಡಿಸಿರುವ ಒಕ್ಕೂಟ ವ್ಯವಸ್ಥೆಯನ್ನು ನಾಶಪಡಿಸುತ್ತದೆ ಎಂದು ಹೇಳಿರು ಸಿದ್ದರಾಮಯ್ಯ ಅವರು, ಕೇಂದ್ರ ಸರ್ಕಾರದ ಮುಂದೆ ರಾಜ್ಯ ಇಟ್ಟಿರುವ ಕರಡು ಯೋಜನೆ ಕುರಿತು ಚರ್ಚೆ ನಡೆಸಲು ಕೂಡಲೇ ಸಮಯ ನಿಗದಿಪಡಿಸುವಂತೆ ಮೋದಿಯವರಿಗೆ ಒತ್ತಾಯಿಸಿದ್ದಾರೆ. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com