ಸಿಎಂ ಆಪ್ತ, ಸಚಿವ ಹೆಚ್ ಸಿ ಮಹದೇವಪ್ಪ ನಿವಾಸದ ಮೇಲೆ ಐಟಿ ದಾಳಿ!

ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಕಾಂಗ್ರೆಸ್ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದು, ಸಚಿವ ಹೆಚ್ ಸಿ ಮಹದೇವಪ್ಪ ಅವರ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
Updated on
ಮೈಸೂರು: ಕರ್ನಾಟಕ ವಿಧಾನಸಭೆ ಚುನಾವಣೆಗೆ ದಿನಗಣನೆ ಆರಂಭವಾಗಿರುವಂತೆಯೇ ಕಾಂಗ್ರೆಸ್ ಪಕ್ಷಕ್ಕೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ಶಾಕ್ ನೀಡಿದ್ದು, ಸಚಿವ ಹೆಚ್ ಸಿ ಮಹದೇವಪ್ಪ ಅವರ ನಿವಾಸದ ಮೇಲೆ ದಾಳಿ ಮಾಡಿದ್ದಾರೆ.
ಸಿಎಂ ಸಿದ್ದರಾಮಯ್ಯ ಅವರ ಆಪ್ತರೂ ಕೂಡ ಆಗಿರುವ ಎಚ್​.ಸಿ. ಮಹದೇವಪ್ಪ ಅವರ ನಿವಾಸದ ಮೇಲೆ ಇಂದು ಆದಾಯ ತೆರಿಗೆ ಅಧಿಕಾರಿಗಳು ದಾಳಿ ನಡೆಸಿದ್ದು, ದಾಖಲೆಗಳ ಪರಿಶೀಲನೆಯಲ್ಲಿ ತೊಡಗಿದ್ದಾರೆ. 
ಮೂಲಗಳ ಪ್ರಕಾರ ಮೈಸೂರಿನ ವಿಜಯನಗರದಲ್ಲಿರುವ ಮಹದೇವಪ್ಪ ನಿವಾಸದ ಮೇಲೆ ಐಟಿ ಅಧಿಕಾರಿಗಳು ಬೆಳಗ್ಗೆಯೇ ದಾಳಿ ನಡೆಸಿದ್ದಾರೆ. ಮೂವರು ಅಧಿಕಾರಿಗಳ ತಂಡವೊಂದು ಬೆಳಗ್ಗೆ ಮಹದೇವಪ್ಪ ಅವರ ನಿವಾಸಕ್ಕೆ ಆಗಮಿಸಿ ದಾಖಲೆ ಪತ್ರಗಳ ಪರಿಶೀಲನೆಯಲ್ಲಿ ತೊಡಗಿದೆ. 
ಇನ್ನು ರಾಜ್ಯ ವಿಧಾನಸಭೆ ಚುನಾವಣೆಗೆ ನಾಮಪತ್ರ ಸಲ್ಲಿಕೆ ಮಾಡಲು ಇಂದು ಕೊನೆಯ ದಿನವಾಗಿದ್ದು, ಈ ಹೊತ್ತಲ್ಲಿ ಐಟಿ ದಾಳಿ ಕಾಂಗ್ರೆಸ್ ಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ,

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com