ಚಿಕ್ಕಬಳ್ಳಾಪುರ: ಕೆರೆಯಲ್ಲಿ ಮುಳುಗಿ ಮೂವರು ಬಾಲಕರು ಸೇರಿ ನಾಲ್ವರು ಸಾವನ್ನಪ್ಪಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆ ಶ್ರೀನಿವಾಸ ನಗರದಲ್ಲಿ ನಡೆದಿದೆ.
ಬೆಂಗಳೂರಿನ ಭೂಪಸಂದ್ರ ನಿವಾಸಿಗಳಾದ ಸಬಾ(12),ಹುರಿಯಾ(8), ಸೌದತ್(10) ಮತ್ತು ಆಸಿಫ್(26) ಶ್ರೀನಿವಾಸ ಸಾಗರ ಜಲಾಶಯದ ನೀರಿನಲ್ಲಿ ಮುಳುಗಿ ದುರ್ಮರಣಕ್ಕೀಡಾಗಿದ್ದಾರೆ.
ಬೆಂಗಳೂರಿನಿಂದ ಚಿಕ್ಕಬಳ್ಳಾಪುರಕ್ಕೆ ತೆರಳಿದ್ದ ಎರಡು ಕುಟುಂಬಗಳು ಶ್ರೀನಿವಾಸ ನಗರದ ಕೆರೆ ವೀಕ್ಷಣೆಗೆ ಹೋಗಿದ್ದಾಗ ನೀರಿನಲ್ಲಿ ಆಟ ಆಡಲು ಇಳಿದಿದ್ದ ಮೂವರು ಮಕ್ಕಳು ನೀರಲ್ಲಿ ಮುಳುಗಿದ್ದರು. ಆ ಸಮಯ ಅವರ ರಕ್ಷಣೆಗೆ ತೆರಳಿದ್ದ ಕಾರು ಚಾಲಕ ಆರೀಫ್ ಸಹ ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಸಧ್ಯ ಇಬ್ಬರ ಮೃತದೇಹಗಳು ಪತ್ತೆಯಾಗಿದ್ದು ಇನ್ನೂ ಇಬ್ಬರ ದೇಹಗಳಿಗಾಗಿ ಹುಡುಕಾಟ ನಡೆದಿದೆ.
ಚಿಕ್ಕಬಳ್ಳಾಪುರ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.