ರಾಜ್ಯ

ಪೊಲೀಸ್ ಕಾಲೊನಿಗಳಲ್ಲಿ ಪ್ರಚಾರ ನಡೆಸಲು ರಕ್ಷಕ ಸೇನೆಗೆ ಹೈಕೋರ್ಟ್ ಅನುಮತಿ

ಪೊಲೀಸ್ ಕಾಲೊನಿಗಳಲ್ಲಿ ಪ್ರಚಾರ ನಡೆಸಲು ರಕ್ಷಕ ಸೇನೆಗೆ ಹೈಕೋರ್ಟ್ ಅನುಮತಿ
ಹೈಕೋರ್ಟ್
Published On :

ಬೆಂಗಳೂರು: ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ಪೊಲೀಸ್ ಕಾಲೊನಿಗಳಲ್ಲಿ ಕಾನೂನುಮಾರ್ಗದಲ್ಲಿ ಶಾಂತಿಯುತವಾಗಿ ಪ್ರಚಾರ ಕಾರ್ಯ ನಡೆಸಲು ಪೊಲೀಸ್ ಇಲಾಖೆಯ ಮಾಜಿ ಉದ್ಯೋಗಿಯೊಬ್ಬರ ರಾಜಕೀಯ ಪಕ್ಷವಾದ ರಕ್ಷಕ ಸೇನೆಗೆ ಅನುವು ಮಾಡಿಕೊಡುವಂತೆ ನಗರ ಪೊಲೀಸ್ ಆಯುಕ್ತ ಮತ್ತು ಪೊಲೀಸ್ ಮಹಾ ನಿರ್ದೇಶಕರಿಗೆ ರಾಜ್ಯ ಹೈಕೋರ್ಟ್ ಆದೇಶ ನೀಡಿದೆ.

ರಾಜ್ಯ ಚುನಾವಣಾ ಆಯೋಗಕ್ಕೆ ನೊಟೀಸ್ ಜಾರಿ ಮಾಡಿದ ನ್ಯಾಯಮೂರ್ತಿ ರಾಘವೇಂದ್ರ ಎಸ್ ಚೌಹಾಣ್ ಈ ಆದೇಶ ನೀಡಿದ್ದಾರೆ. ರಕ್ಷಕ ಸೇನೆಯ ಕಾರ್ಯದರ್ಶಿ ಕೆ.ಆರ್.ಪೂರ್ಣಿಮಾ ಎಂಬುವವರು ಅರ್ಜಿ ಸಲ್ಲಿಸಿದ್ದರು. ಪೊಲೀಸ್ ಕಾಲೊನಿಯಲ್ಲಿ ಪ್ರಚಾರ ಮಾಡುವುದನ್ನು ತಿರಸ್ಕರಿಸಿ ನಗರ ಪೊಲೀಸ್ ಆಯುಕ್ತರು ಆದೇಶ ನೀಡಿದ್ದನ್ನು ಪ್ರಶ್ನಿಸಿ ಅವರು ಕೋರ್ಟ್ ನಲ್ಲಿ ದಾವೆ ಹೂಡಿದ್ದರು.

ಅಖಿಲ ಕರ್ನಾಟಕ ಪೊಲೀಸ್ ಮಹಾಸಭಾದ ಅಧ್ಯಕ್ಷ ವಿ,ಶಶಿಧರ್ ಅವರು ಎಲ್ಲಾ ಪೊಲೀಸ್ ಠಾಣೆಗಳು ಮತ್ತು ವಿಭಾಗೀಯ ಪೊಲೀಸ್ ಅಧಿಕಾರಿಗಳ ಕಚೇರಿಗಳಿಗೆ ಭೇಟಿ ನೀಡಿ ಪೊಲೀಸ್ ಅಧಿಕಾರಿಗಳ ಕುಟುಂಬ ಸದಸ್ಯರ ವಿವರ ಪಡೆದುಕೊಳ್ಳುವುದಕ್ಕೆ ಪೊಲೀಸ್ ಕಾಲೊನಿಗಳಿಗೆ ರಾಜಕೀಯ ಪಕ್ಷಗಳು ಭೇಟಿ ನೀಡಲು ಅವಕಾಶ ಕೋರಿದ್ದರು. ಅಲ್ಲಿ ರಾಜಕೀಯ ಪಕ್ಷಗಳು ಹೋಗಿ ಚುನಾವಣೆ ಹಿನ್ನೆಲೆಯಲ್ಲಿ ಕರಪತ್ರಗಳನ್ನು ಹಂಚುವುದು ಕೂಡ ಉದ್ದೇಶವಾಗಿತ್ತು. ಆದರೆ ಅದಕ್ಕೆ ನಗರ ಪೊಲೀಸ್ ಆಯುಕ್ತ ಟಿ.ಸುನಿಲ್ ಕುಮಾರ್ ಅವಕಾಶ ನಿರಾಕರಿಸಿದ್ದರು.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.