ಹೆಚ್-1ಬಿ ವೀಸಾಗೆ ಅಮೆರಿಕಾ ಕಡಿವಾಣ: ಸುಷ್ಮಾ ಸ್ವರಾಜ್ ಗೆ ಸಲಹೆ ನೀಡಿದ ಸಿಎಂ ಸಿದ್ದರಾಮಯ್ಯ

ಹೆಚ್-1ಬಿ ವೀಸಾದಾರರ ಸಂಗಾತಿಗಳಿಗೆ ಅನುಮತಿ ನಿರಾಕರಿಸಲು ಮುಂದಾಗಿರುವ ಅಮೆರಿಕ ನಿರ್ಧಾರ ಇದೀಗ ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಇದೇ ವಿಚಾರ ಸಂಬಂಧ ಸಿಎಂ ಸಿದ್ದರಾಮಯ್ಯ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಕೆಲ ಸಲಹೆಗಳನ್ನು ನೀಡಿದ್ದಾರೆ.
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಹೆಚ್-1ಬಿ ವೀಸಾದಾರರ ಸಂಗಾತಿಗಳಿಗೆ ಅನುಮತಿ ನಿರಾಕರಿಸಲು ಮುಂದಾಗಿರುವ ಅಮೆರಿಕ ನಿರ್ಧಾರ ಇದೀಗ ದೇಶಾದ್ಯಂತ ವ್ಯಾಪಕ ಚರ್ಚೆಗೆ ಕಾರಣವಾಗಿದ್ದು, ಇದೇ ವಿಚಾರ ಸಂಬಂಧ ಸಿಎಂ ಸಿದ್ದರಾಮಯ್ಯ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಕೆಲ ಸಲಹೆಗಳನ್ನು ನೀಡಿದ್ದಾರೆ.
ಅಮೆರಿಕದಲ್ಲಿರುವ ಭಾರತೀಯ ಹೆಚ್-1ಬಿ ವೀಸಾದಾರರ ಸಂಗಾತಿಗಳಿಗೆ ಅನುಮತಿ ನಿರಾಕರಿಸುವ ಅಮೆರಿಕ ನಿರ್ಧಾರದ ವಿರುದ್ದ ಸಿಎಂ ಸಿದ್ದರಾಮಯ್ಯ ನೇರವಾಗಿಯೇ ತಮ್ಮ ಅಸಮಾಧಾನ ವ್ಯಕ್ತಪಡಿಸಿದ್ದು, ಅಮೆರಿಕ ಸರ್ಕಾರದ ನಿರ್ಧಾರ ಸರಿಯಿಲ್ಲ. ಅಮೆರಿಕ ಸರ್ಕಾರದ ನಿರ್ಧಾರದಿಂದ ಅಲ್ಲಿ ಉದ್ಯೋಗ ಮಾಡುತ್ತಿರುವ ಕರ್ನಾಟಕ ಮೂಲದ ಟೆಕ್ಕಿಗಳಿಗೆ ತೀವ್ರ ತೊಂದರೆಯಾಗಲಿದ್ದು, ಈ ಬಗ್ಗೆ ಕೇಂದ್ರ ಸರ್ಕಾರ ನಿರ್ಧಾರ ಕೈಗೊಳ್ಳಬೇಕಿದೆ. ಬೆಂಗಳೂರು ಮಾಹಿತಿ ಮತ್ತು ತಂತ್ರಜ್ಞಾನ ಕ್ಷೇತ್ರದ ಪ್ರಮುಖ ನಗರವಾಗಿದ್ದು, ಇಲ್ಲಿ ಅಮೆರಿಕನ್ನರೂ ಸೇರಿದಂತೆ ಲಕ್ಷಾಂತರ ವಿದೇಶಿಗರು ನೆಲೆ ಕಂಡುಕೊಂಡಿದ್ದಾರೆ. ಅಮೆರಿಕದ ನಿರ್ಧಾರದಂತೆ ಅವರ ಸಂಗಾತಿಗಳಿಗೂ ನಾವು ಅನುಮತಿ ನಿರಾಕರಿಸಬೇಕೇ? ಎಂದು ಸಿದ್ದರಾಮಯ್ಯ ಕೇಂದ್ರ ವಿದೇಶಾಂಗ ಸಚಿವೆ ಸುಷ್ಮಾ ಸ್ವರಾಜ್ ಅವರಿಗೆ ಹೇಳಿದ್ದಾರೆ.
ಈ ವಿಚಾರದ ಬಗ್ಗೆ ಗಂಭೀರ ಚಿಂತನೆ ಮತ್ತು ಸೂಕ್ತ ನಿರ್ಧಾರ ಕೈಗೊಳ್ಳ ಬೇಕಿದೆ. ಅಂತೆಯೇ ಅಮೆರಿಕ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಬೇಕಿದೆ. ಕೇಂದ್ರ ವಿದೇಶಾಂಗ ಇಲಾಖೆ ನಿರ್ಧಾರ ಕೈಗೊಳ್ಳುವ ವಿಶ್ವಾಸವಿದೆ ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. ಸಿದ್ದರಾಮಯ್ಯ ಅವರ ಈ ಟ್ವೀಟ್ ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಚರ್ಚೆಗೆ ಗ್ರಾಸವಾಗುತ್ತಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com