ಶಾಸಕ ಜಿ ಮಂಜುನಾಥ್ ಸ್ಪರ್ಧೆ ಅಸಿಂಧು: ಹೈಹೋರ್ಟ್ ತೀರ್ಪು ಎತ್ತಿ ಹಿಡಿದ ಸುಪ್ರೀಂ

2013ರ ವಿಧಾನಸಭೆ ಚುನಾವಣೆ ವೇಳೆ ನಕಲಿ ಜಾತಿ ಪ್ರಮಾಣ ಪತ್ರ ಬಳಸಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿದ್ದ ಮುಳಬಾಗಿಲು ಕ್ಷೇತ್ರದ ಕಾಂಗ್ರೆಸ್ ಶಾಸಕ ಜಿ. ಮಂಜುನಾಥ್ ಆಯ್ಕೆ....
ಶಾಸಕ ಜಿ ಮಂಜುನಾಥ್ ಸ್ಪರ್ಧೆ ಅಸಿಂಧು: ಹೈಹೋರ್ಟ್ ತೀರ್ಪು ಎತ್ತಿ ಹಿಡಿದ ಸುಪ್ರೀಂ
ಶಾಸಕ ಜಿ ಮಂಜುನಾಥ್ ಸ್ಪರ್ಧೆ ಅಸಿಂಧು: ಹೈಹೋರ್ಟ್ ತೀರ್ಪು ಎತ್ತಿ ಹಿಡಿದ ಸುಪ್ರೀಂ
ನವದೆಹಲಿ: 2013ರ ವಿಧಾನಸಭೆ ಚುನಾವಣೆ ವೇಳೆ ನಕಲಿ ಜಾತಿ ಪ್ರಮಾಣ ಪತ್ರ ಬಳಸಿ ಮೀಸಲು ಕ್ಷೇತ್ರದಿಂದ ಸ್ಪರ್ಧಿಸಿದ್ದ ಮುಳಬಾಗಿಲು ಕ್ಷೇತ್ರದ ಕಾಂಗ್ರೆಸ್ ಶಾಸಕ  ಜಿ. ಮಂಜುನಾಥ್ ಆಯ್ಕೆ ಅಕ್ರಮ ಎಂದಿದ್ದ ಹೈಕೋರ್ಟ್ ತೀರ್ಪನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ.
ಶಾಸಕನಾಗಿ ತನ್ನ ಆಯ್ಕೆ ವಿಚಾರದಲ್ಲಿ ಹೈಕೋರ್ಟ್ ನೀಡಿದ್ದ ತಿರ್ಪು ಪ್ರಶ್ನಿಸಿ ಮಂಜುನಾಥ್ ಗುರುವಾರ ಸುಪ್ರೀಂ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ದೀಪಕ್‌ ಮಿಶ್ರಾ ಹೈಕೋರ್ಟ್‌ತೀರ್ಪಿಗೆ ಮಧ್ಯಂತರ ತಡೆ ನೀಡಲು ನಿರಾಕರಿಸಿದ್ದಾರೆ.
ಇದೇ ವೇಳೆ ಶಾಸಕರ ಜಾತಿ ಪ್ರಮಾಣಪತ್ರ ನಕಲಿ ಎನ್ನುವುದಕ್ಕೆ ಸೂಕ್ತ ದಾಖಲೆ ಒದಗಿಸಿ ಎಂದು ತಕರಾರು ಅರ್ಜಿ ಸಲ್ಲಿಸಿದ್ದ ಮುನಿ ಅಂಜನಪ್ಪ ಅವರಿಗೆ ನ್ಯಾಯಾಲಯ ನೋಟೀಸ್ ಜಾರಿ ಮಾಡಿದೆ.
2013ರ ಚುನಾವಣೆಗೆ ಸ್ಪರ್ಧಿಸುವ ವೇಳೆ ಮಂಜುನಾಥ್‌ ಸಲ್ಲಿಸಿದ್ದ ಜಾತಿ ಪ್ರಮಾಣ ಪತ್ರ ನಕಲಿಯಾಗಿದೆ ಎನ್ನುವ ಕುರಿತು ಪ್ರಕರಣ ದಾಖಲಿಸಿದ್ದ ಮುನಿ ಅಂಜನಪ್ಪ ಅವರ ಅರ್ಜಿ ವಿಚಾರಣೆ ನಡೆಸಿದ್ದ ಕರ್ನಾಟಕ ಹೈಕೋರ್ಟ್ನ್ಯಾಯಮೂರ್ತಿ ಎ.ಎಸ್.ಬೋಪಣ್ಣ ಅವರಿದ್ದ ಏಕಸದಸ್ಯ ಪೀಠ ಬುಧವಾರ ಪ್ರಕಟಿಸಿತ್ತು.
ಶಾಸಕ ಸ್ಥಾನಕ್ಕೆ ಸ್ಪರ್ಧೆ ಅಸಿಂಧು ಎಂದಿದ್ದ ನ್ಯಾಯಾಲಯ ಮಂಜುನಾಥ್‌ಗೆ 25 ಸಾವಿರ ರೂ. ದಂಡ ವಿಧಿಸಿತ್ತು.
ಹೈಕೋರ್ಟ್ ತೀರ್ಪಿನ ಹಿನ್ನೆಲೆಯಲ್ಲಿ ಗುರುವಾರದಂದು ಚುನಾವಣಾ ಆಯೋಗ ಮುಲಬಾಗಿಲು ಕಾಂಗ್ರೆಸ್ ಅಭ್ಯರ್ಥಿ ಮಂಜುನಾಥ್ ನಾಮಪತ್ರವನ್ನು ತಿರಸ್ಕರಿಸಿತ್ತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com