ಹೈಕೋರ್ಟ್ ನಲ್ಲಿಯೂ ರೋಹಿಣಿ ಸಿಂಧೂರಿಗೆ ಹಿನ್ನಡೆ, ವರ್ಗಾವಣಾ ಆದೇಶ ಪಾಲಿಸಿ ಎಂದ ನ್ಯಾಯಾಲಯ

ತಮ್ಮ ವರ್ಗಾವಣೆ ಕುರಿತಂತೆ ಸರ್ಕಾರದ ಆದೇಶ ಹಾಗೂ ಸಿಎಟಿ ನಿರ್ದೇಶನವನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಮತ್ತೆ ಹಿನ್ನಡೆಯಾಗಿದೆ.
ರೋಹಿಣಿ ಸಿಂಧೂರಿ
ರೋಹಿಣಿ ಸಿಂಧೂರಿ
ಬೆಂಗಳೂರು: ತಮ್ಮ ವರ್ಗಾವಣೆ ಕುರಿತಂತೆ ಸರ್ಕಾರದ ಆದೇಶ ಹಾಗೂ ಸಿಎಟಿ ನಿರ್ದೇಶನವನ್ನು ಪ್ರಶ್ನಿಸಿ ಹೈಕೋರ್ಟ್ ಮೊರೆ ಹೋಗಿದ್ದ ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರಿಗೆ ಮತ್ತೆ ಹಿನ್ನಡೆಯಾಗಿದೆ.
ರೋಹಿಣಿ ಸಿಂಧೂರಿ ಅವರ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ಸಿಎಟಿ ಆದೇಶಕ್ಕಷ್ಟೇ ತಡೆ ನೀಡಿದ್ದು ಸರ್ಕಾರದ ವರ್ಗಾವಣಾ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ.
ರೋಹಿಣಿ ಸಿಂಧೂರಿ ದಾಸರಿ ಈಗ ವರ್ಗಾವಣೆ ಮಾಡಲಾಗಿರುವ ಉದ್ಯೋಗ ಮತ್ತು ತರಬೇತಿ ಕೇಂದ್ರದ ಆಯುಕ್ತ ಹುದ್ದೆಯ ಅಧಿಕಾರ ಸ್ವೀಕರಿಸಿ ಕಾರ್ಯ ನಿರ್ವಹಿಸುವಂತೆ  ನ್ಯಾಯಾಲಯವು ಮೌಖಿಕ ನಿರ್ದೇಶನ ನಿಡಿದೆ.
ಹಾಸನ ಜಿಲ್ಲಾಧಿಕಾರಿಯಾಗಿದ್ದ ರೋಹಿಣಿ ಸಿಂಧೂರಿ ಅವರನ್ನು ಸರ್ಕಾರವು ಬೆಂಗಳೂರು ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತ ಸ್ಥಾನಕ್ಕೆ ವರ್ಗಾವಣೆ ಮಾಡಿ  ಆದೇಶಿಸಿತ್ತು. ಸರ್ಕಾರಿ ಆದೇಶ ಪ್ರಶ್ನಿಸಿ ಸಿಎಟಿ ಮೊರೆ ಹೋಗಿದ್ದ ರೋಹಿಣಿ ಅವರಿಗೆ  ಅಲ್ಲಿ ಸಹ ಹಿನ್ನಡೆಯಾಗಿದ್ದಿತು. ಆಗ ಅವರು ಹೈಕೋರ್ಟ್ ಮೆಟ್ಟಿಲೇರಿ ತಮ್ಮ ವರ್ಗಾವಣೆಯನ್ನು ರದ್ದುಗೊಳಿಸುವಂತೆ ಮನವಿ ಮಾಡಿದ್ದರು. ಸಧ್ಯ ಅಲ್ಲಿ ಸಹ ಅವರಿಗೆ ಹಿನ್ನಡೆಯಾಗಿದ್ದು ವರ್ಗಾವಣೆ ಆದೇಶಕ್ಕೆ ತಡೆ ನೀಡದ ಕಾರಣ ರೋಹಿಣಿ ತಾವು ಸರ್ಕಾರ ವರ್ಗಾವಿಸಿದ ಸ್ಥಾನಕ್ಕೆ ತೆರಳಿ ಅಧಿಕಾರ ಸ್ವೀಕರಿಸುವುದು ಅನಿವಾರ್ಯವಾಗಿದೆ.
ರೋಹಣಿ ಸಿಂಧೂರಿ ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಚ್.ಜಿ.ರಮೇಶ್ ನೇತೃತ್ವದ ವಿಭಾಗೀಯ ನ್ಯಾಯಪೀಠ ಶುಕ್ರವಾರ ವಿಚಾರಣೆಗೊಳಪಡಿಸಿತ್ತು. ಈ ವೇಳೆ ಏ. 17ರಂದು ಸಿಎಟಿ ನೀಡಿದ್ದ ಆದೇಶಕ್ಕೆ ನ್ಯಾಯಾಲಯ ತಡೆ ನೀಡಿದೆ.
ಮುಂದಿನ ವಿಚಾರಣೆ ವೇಳ್ಗೆ ಸರ್ಕಾರವು ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿ ಅನುಸರಿಸುವ ಮಾರ್ಗಸೂಚಿಗಳ ವಿವರ ನೀಡಬೇಕೆಂದು ಸರ್ಕಾರಕ್ಕೆ ನ್ಯಾಯಾಲಯ ಸೂಚನೆ ನೀಡಿದೆ.
ಪ್ರಕರಣದ ಮುಂದಿನ ವಿಚಾರಣೆ ಮೇ 30ಕ್ಕೆ ನಡೆಯಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com