ಘಟನೆಗೆ ಸಂಬಂಧಿಸಿದಂತೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಶಾಕಿರ್ ಸನದಿ ನೀಡಿದ ದೂರಿನ ಆಧಾರದ ಮೇಲೆ ಹುಬ್ಬಳ್ಳಿಯ ಗೋಕುಲ ಠಾಣೆಯಲ್ಲಿ ರಾಹುಲ್ ಗಾಂಧಿ ವಿಶೇಷ ವಿಮಾನದ ಇಬ್ಬರು ಪೈಲಟ್‍ಗಳ ವಿರುದ್ಧ ಕರ್ತವ್ಯ ಲೋಪ ಆರೋಪದಡಿ, ಏರ್ ಕ್ರಾಫ್ಟ್ ಕಾಯ್ದೆ 287, 336, ಐಪಿಸಿ ಸೆಕ್ಷನ್ 11 ಅನ್ವಯ ಪೊಲೀಸರು ಎಫ್‍ಐಆರ್ ದಾಖಲಿಸಿಕೊಂಡಿದ್ದಾರೆ.