ಹೆಲ್ಮೆಟ್ ಧರಿಸದೆ ಬೈಕ್‌ನಲ್ಲಿ ತೆರಳುತ್ತಿದ್ದವರ ಮೇಲೆ ಪೊಲೀಸರಿಂದ ಶೂ ಎಸೆತ

ಹೆಲ್ಮೆಟ್ ಧರಿಸದೆ ಬೈಕ್ ನಲ್ಲಿ ಸಂಚರಿಸುತ್ತಿದ್ದ ಯುವಕರ ಮೇಲೆ ಸಂಚಾರಿ ಪೊಲೀಸರೊಬ್ಬರು ಬೂಟಿನಿಂದ ಹೊಡೆದ ವಿಡಿಯೋ ಇದೀಗ ವೈರಲ್ ಆಗಿದೆ...
ಸಂಗ್ರಹ ಚಿತ್ರ
ಸಂಗ್ರಹ ಚಿತ್ರ
ಬೆಂಗಳೂರು: ಹೆಲ್ಮೆಟ್ ಧರಿಸದೆ ಬೈಕ್ ನಲ್ಲಿ ಸಂಚರಿಸುತ್ತಿದ್ದ ಯುವಕರ ಮೇಲೆ ಸಂಚಾರಿ ಪೊಲೀಸರೊಬ್ಬರು ಬೂಟಿನಿಂದ ಹೊಡೆದ ವಿಡಿಯೋ ಇದೀಗ ವೈರಲ್ ಆಗಿದೆ. 
ಯುವಕರು ಬೈಕ್ ನಲ್ಲಿ ರಿಂಗ್ ರಸ್ತೆಯಲ್ಲಿ ಗೊರಗುಂಟೆಪಾಳ್ಯ ಕಡೆಯಿಂದ ಹೆಬ್ಬಾಳದ ಕಡೆಗೆ ಹೋಗುತ್ತಿರುವಾಗ ಎಂಎಸ್ ಪೆಟ್ರೋಲ್ ಬಂಕ್ ಸಮೀಪ ಕರ್ತವ್ಯನಿರತ ಇಬ್ಬರು ಸಂಚಾರಿ ಪೊಲೀಸರ ಪೈಕಿ ಒಬ್ಬರು ದೂರದಿಂದಲೇ ಯುವಕರನ್ನು ನೋಡಿ ಕಾಲಿನಿಂದ ಬೂಟು ತೆಗೆದು ಹೊಡೆದ ದೃಶ್ಯ ಅದೇ ಮಾರ್ಗದಲ್ಲಿ ಹೋಗುತ್ತಿದ್ದ ಕಾರಿನಲ್ಲಿ ಅಳವಡಿಸಲಾಗಿದ್ದ ಕ್ಯಾಮೆರಾದಲ್ಲಿ ಸೆರೆಯಾಗಿದೆ. 
ಈ ವಿಡಿಯೋವನ್ನು ಯೂಟ್ಯೂಬ್  ನಲ್ಲಿ ಅಪ್ ಲೋಡ್ ಮಾಡಲಾಗಿದ್ದು ಇದನ್ನು ಸುಮಾರು 20 ಸಾವಿರ ಮಂದಿ ವೀಕ್ಷಿಸಿದ್ದಾರೆ. ಅಲ್ಲದೆ ಪೊಲೀಸರ ಈ ಕಾರ್ಯದ ಕುರಿತು ಸಾಮಾಜಿಕ ಜಾಲತಾಣದಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com