ಪಿಯುಸಿ ಟಾಪರ್ ವಿದ್ಯಾರ್ಥಿಗಳಿವರು

ದ್ವಿತೀಯ ಪಿಯುಸಿ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಈ ಬಾರಿ ಕಲೆ, ವಾಣಿಜ್ಯ ಮತ್ತು ವಿಜ್ಞಾನ ...
ಪದವಿಪೂರ್ವ ಶಿಕ್ಷಣ ಮಂಡಳಿಯಲ್ಲಿ ಫಲಿತಾಂಶ ಪ್ರಕಟಿಸಿದ ನಿರ್ದೇಶಕಿ ಸಿ.ಶಿಖಾ
ಪದವಿಪೂರ್ವ ಶಿಕ್ಷಣ ಮಂಡಳಿಯಲ್ಲಿ ಫಲಿತಾಂಶ ಪ್ರಕಟಿಸಿದ ನಿರ್ದೇಶಕಿ ಸಿ.ಶಿಖಾ

ಬೆಂಗಳೂರು: ದ್ವಿತೀಯ ಪಿಯುಸಿ ಫಲಿತಾಂಶ ಸೋಮವಾರ ಪ್ರಕಟವಾಗಿದ್ದು, ಈ ಬಾರಿ ಕಲೆ, ವಾಣಿಜ್ಯ ಮತ್ತು ವಿಜ್ಞಾನ ಮೂರು ವಿಭಾಗಗಳಲ್ಲಿ ವಿದ್ಯಾರ್ಥಿನಿಯರೇ ಮೇಲುಗೈ ಸಾಧಿಸಿದ್ದಾರೆ.

ಕಲಾವಿಭಾಗದಲ್ಲಿ ಇಬ್ಬರು, ವಾಣಿಜ್ಯ ವಿಭಾಗದಲ್ಲಿ ಇಬ್ಬರು ಹಾಗೂ ವಿಜ್ಞಾನ ವಿಭಾಗದಲ್ಲಿ ಒಬ್ಬರು ಪ್ರಥಮ ಸ್ಥಾನ ಪಡೆದಿದ್ದಾರೆ.

ಕಲಾ ವಿಭಾಗದಲ್ಲಿ ಎಂದಿನಂತೆ ಬಳ್ಳಾರಿ ಜಿಲ್ಲೆಯ ಕೊಟ್ಟೂರಿನ ಇಂದು ಕಾಲೇಜಿನ ವಿದ್ಯಾರ್ಥಿಗಳು ಪ್ರಥಮ ಸ್ಥಾನವನ್ನು ಪಡೆದಿದ್ದಾರೆ. ಸ್ವಾತಿ ಎಸ್ 595 ಅಂಕ, ರಮೇಶ್ 593 ಅಂಕ, ಕಾವ್ಯಂಜಲಿ ಗೊರವರ 588 ಅಕಗಳನ್ನು ಪಡೆದು ರಾಜ್ಯಕ್ಕೆ ಅತಿ ಹೆಚ್ಚು ಅಂಕ ಗಳಿಸಿದವರಾಗಿದ್ದಾರೆ.

ವಾಣಿಜ್ಯ ವಿಭಾಗದಲ್ಲಿ ಬೆಂಗಳೂರಿನ ಇಬ್ಬರು ವಿದ್ಯಾರ್ಥಿನಿಯರು ಟಾಪರ್. ಮಲ್ಲೇಶ್ವರಂ ವಿದ್ಯಾಮಂದಿರ ಕಾಲೇಜಿನ ವರ್ಷಿಣಿ ಎಂ ಭಟ್ ಮತ್ತು ರಾಜಾಜಿನಗರ ಎಎಸ್‍ಸಿ ಪಿಯು ಕಾಲೇಜಿನ ಅಮೃತಾ ಎಸ್‍ಆರ್ 595 ಅಂಕಗಳನ್ನು ಗಳಿಸಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಬೆಂಗಳೂರಿನ ಮೌಂಟ್ ಕಾರ್ಮೆಲ್ ಕಾಲೇಜಿನ ಪೂರ್ವಿಕಾ 594 ಅಂಕಗಳಿಸಿ ಎರಡನೇ ಸ್ಥಾನ ಪಡೆದುಕೊಂಡಿದ್ದಾರೆ.

ವಿಜ್ಞಾನ ವಿಭಾಗದಲ್ಲಿ ಬೆಂಗಳೂರಿನ ಬಸವೇಶ್ವರನಗರದ ವಿವಿಎಸ್ ಸರ್ದಾರ್ ಪಟೇಲ್ ಕಾಲೇಜಿನ ಕೃತಿ ಮುಟ್ಟಗಿ 597 ಅಂಕಗಳಿಸಿ ಮೊದಲ ಸ್ಥಾನವನ್ನು ಪಡೆದುಕೊಂಡಿದ್ದಾರೆ. ಹಾಸನದ ಮಾಸ್ಟರ್ಸ್ ಪಿಯು ಕಾಲೇಜಿನ ಮೋಹನ್ ಎಸ್‍ಎಲ್ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸುರತ್ಕಲ್ ಗೋವಿಂದದಾಸ ಪಿಯು ಕಾಲೇಜಿನ ಅಂಕಿತಾ ಪಿ 595 ಅಂಕಗಳಿಸುವ ಮೂಲಕ ಎರಡನೇ ಸ್ಥಾನವನ್ನು ಪಡೆದುಕೊಂಡಿದ್ದಾರೆ.



ಜೂನ್ 8ರಿಂದ 20ರವರೆಗೆ ನಡೆಯುವ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಗೆ ಶುಲ್ಕ ಪಾವತಿಸಲು ಮೇ 15 ಕಡೇ ದಿನ. ಕಾಲೇಜಿನವರು ಪರೀಕ್ಷಾ ಶುಲ್ಕವನ್ನು ಒಂದೇ ಕಂತಿನಲ್ಲಿ ಖಜಾನೆಗೆ ಸಂದಾಯ ಮಾಡಬೇಕು. ಕಾಲೇಜಿನವರು ಪರೀಕ್ಷಾ ಅರ್ಜಿಗಳನ್ನು ಮೂಲ ಚಲನ್ ಸಹಿತ ಜಿಲ್ಲಾ ಉಪ ನಿರ್ದೇಶಕರ ಕಚೇರಿಗೆ ಕಡ್ಡಾಯವಾಗಿ ಮೇ 17 ಕ್ಕೂ ಮುನ್ನ ಸಲ್ಲಿಸಬೇಕು.

ಪೂರಕ ಪರೀಕ್ಷೆಗೆ ವಿದ್ಯಾರ್ಥಿಗಳು ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗ ಹಾಗೂ ಪ್ರವರ್ಗ 1ರ ವಿದ್ಯಾರ್ಥಿಗಳನ್ನು ಹೊರತುಪಡಿಸಿ ಉಳಿದ ವಿದ್ಯಾರ್ಥಿಗಳು ಒಂದು ವಿಷಯಕ್ಕೆ 140 ರೂ. ಎರಡು ವಿಷಯಕ್ಕೆ 270 ರೂ. ಮೂರಕ್ಕಿಂತ ಹೆಚ್ಚಿನ ವಿಷಯಕ್ಕೆ 400 ರೂ. ಶುಲ್ಕವನ್ನು ಪಾವತಿಸಬೇಕು.

ಎಸ್ಸಿ – ಎಸ್ಟಿ, ಪ್ರವರ್ಗ 1 ಸೇರಿದಂತೆ ಎಲ್ಲಾ ವಿದ್ಯಾರ್ಥಿಗಳು 50 ರೂ. ಅಂಕ ಪಟ್ಟಿ ಶುಲ್ಕ ಪಾವತಿಸಬೇಕು. ಫಲಿತಾಂಶ ತಿರಸ್ಕರಣಾ ಶುಲ್ಕ ಒಂದು ಬಾರಿಗೆ 175 ರೂ. ಎರಡು ಮತ್ತು ಅಂತಿಮ ಹಂತಕ್ಕೆ 350 ರೂ. ನಿಗದಿಪಡಿಸಲಾಗಿದೆ ಎಂದು ಅವರು ಹೇಳಿದರು. ಪಿಸಿಎಂಬಿ ವಿಷಯ ಹೊರತುಪಡಿಸಿ ಉಳಿದೆಲ್ಲಾ ವಿಷಯಗಳಿಗೂ ಈ ಪೂರಕ ಪರೀಕ್ಷೆ ಕಡೆಯದಾಗಿರುತ್ತದೆ ಎಂದು ಅವರು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com