ಟೆಕ್ಕಿ ಅಜಿತಾಭ್ ನಾಪತ್ತೆ ಪ್ರಕರಣ; ಸಿಬಿಐ ತನಿಖೆ ಕುರಿತು ಆ.2 ರಂದು 'ಹೈ' ನಿರ್ಧಾರ

ಟೆಕ್ಕಿ ಅಜಿತಾಭ್ ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಪ್ರಕರಣವನ್ನು ಕೇಂದ್ರ ತನಿಖಾ ದಳ (ಸಿಬಿಐ)ಕ್ಕೆ ವಹಿಸುವ ಕುರಿತು ಆಗಸ್ಟ್.2 ರಂದು ನಿರ್ಧಾರ ಕೈಗೊಳ್ಳಲಿದೆ ಎಂದು ಬುಧವಾರ ತಿಳಿದುಬಂದಿದೆ...
ಟೆಕ್ಕಿ ಅಜಿತಾಭ್
ಟೆಕ್ಕಿ ಅಜಿತಾಭ್
ಬೆಂಗಳೂರು: ಟೆಕ್ಕಿ ಅಜಿತಾಭ್ ನಾಪತ್ತೆ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಹೈಕೋರ್ಟ್ ಪ್ರಕರಣವನ್ನು ಕೇಂದ್ರ ತನಿಖಾ ದಳ (ಸಿಬಿಐ)ಕ್ಕೆ ವಹಿಸುವ ಕುರಿತು ಆಗಸ್ಟ್.2 ರಂದು ನಿರ್ಧಾರ ಕೈಗೊಳ್ಳಲಿದೆ ಎಂದು ಬುಧವಾರ ತಿಳಿದುಬಂದಿದೆ. 
ನ್ಯಾಯಮೂರ್ತಿ ಅರವಿಂದ ಕುಮಾರ್ ಅವರು ಮಾತನಾಡಿ, ಪ್ರಕರಣದ ತನಿಖೆ ಯಾವ ಹಂತದಲ್ಲಿದೆ ಎಂಬುದರ ಮಾಹಿತಿಗಳ ಬಳಿಕ ನ್ಯಾಯಾಲಯ ನಿರ್ಧಾರ ಕೈಗೊಳ್ಳಲಿದೆ. ಪ್ರಕರಣದ ವಿಚಾರಣೆ ಗುರುವಾರ ನಡೆಯಲಿದ್ದು, ವಿಚಾರಣೆಗೂ ಮೊದಲು ಪ್ರಕರಣ ಕುರಿತು ಸಂಗ್ರಹಿಸಲಾಗಿರುವ ಎಲ್ಲಾ ದಾಖಲೆಗಳನ್ನೂ ಮುಚ್ಚಿನ ಲಕೋಟೆಯಲ್ಲಿ ಸಲ್ಲಿಸುವಂತೆ ಅಧಿಕಾರಿಗಳಿಗೆ ನ್ಯಾಯಾಲಯ ಸೂಚಿಸಿದೆ ಎಂದು ಹೇಳಿದ್ದಾರೆ. 
ಪ್ರಕರಣ ಕುರಿತು ತನಿಖಾ ಪ್ರಗತಿಗಾಗಿ ಎರಡು ವಾರಗಳ ಕಾಲ ಕಾಲಾವಕಾಶ ನೀಡುವಂತೆ ರಾಜ್ಯ ಸರ್ಕಾರದ ನ್ಯಾಯಾಲಯದ ಬಳಿ ಮನವಿ ಮಾಡಿಕೊಂಡಿದೆ. ಆದರೆ, ಅಜಿತಾಭ್ ತಂದೆ ಅಶೋಕ್ ಕುಮಾರ್ ಸಿನ್ಹಾ ಅವರು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿ ರಾಜ್ಯದ ತನಿಖೆ ಮೇಲೆ ನಮಗೆ ನಂಬಿಕೆ ಇಲ್ಲ ಎಂದು ಹೇಳಿರುವ ಹಿನ್ನಲೆಯಲ್ಲಿ ನ್ಯಾಯಾಲಯ ನಾಳೆ ಸಿಬಿಐ ತನಿಖೆ ಕುರಿತು ಅಂತಿಮ ನಿರ್ಧಾರ ಕೈಗೊಳ್ಳಲಿದೆ. 
ಬೆಳ್ಳಂದೂರಿನ ಬ್ರಿಟಿಷ್ ಟೆಲಿಕಾಂನಲ್ಲಿ ಕಳೆದ 5 ವರ್ಷಗಳಿಂದ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಅಜಿತಾಭ್ ತನ್ನ ಸಿಯಾಜ್ ಕಾರನ್ನು ಮಾರಾಟ ಮಾಡುವ ಸಂಬಂಧ ಓಎಲ್ಎಕ್ಸ್ ನಲ್ಲಿ ಮಾಹಿತಿ ಹಾಕಿದ್ದರು. ಓಎಲ್ಎಕ್ಸ್ ನಲ್ಲಿ ಪ್ರಕಟಿಸಿದ ಬಳಿಕ ಅಜಿತಾಭ್ ಕರೆ ಬಂದಾಗಲೆಲ್ಲಾ ಕಾರು ಸಮೇತ ಹೊರ ಹೋಗಿ ಬರುತ್ತಿದ್ದರು. ಹೀಗೆ ಕಳೆದ ವರ್ಷ ಡಿಸೆಂಬರ್18 ರಂದು ಅವರ ಮೊಬೈಲ್'ಗೆ ಕರೆಯೊಂದು ಬಂದಿತ್ತು. ಹೊರಗೆ ಹೋದ ಅಜಿತಾಭ್ ಪುನಃ ವಾಪಸ್ ಆಗದೆ ನಿಗೂಢವಾಗಿ ನಾಪತ್ತೆಯಾಗಿದ್ದರು. 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com