ಆದಾಯ ತೆರಿಗೆ ವಂಚನೆ: ಡಿಕೆ ಶಿವಕುಮಾರ್ ಗೆ ಷರತ್ತುಬದ್ದ ಜಾಮೀನು

ಆದಾಯ ತೆರಿಗೆ ವಂಚನೆ ಪ್ರಕರಣ, ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಆರ್ಥಿಕ ಅಪರಾಧ ಪ್ರಕರಣಗಳ....
ಡಿ.ಕೆ. ಶಿವಕುಮಾರ್
ಡಿ.ಕೆ. ಶಿವಕುಮಾರ್
Updated on: 
ಬೆಂಗಳೂರು: ಆದಾಯ ತೆರಿಗೆ ವಂಚನೆ ಪ್ರಕರಣ, ಅಕ್ರಮ ಹಣ ವರ್ಗಾವಣೆ ಆರೋಪ ಎದುರಿಸುತ್ತಿದ್ದ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್ ಅವರಿಗೆ ಆರ್ಥಿಕ ಅಪರಾಧ ಪ್ರಕರಣಗಳ ವಿಶೇಷ ನ್ಯಾಯಾಲಯ ಷರತ್ತುಬದ್ದ ಜಾಮೀನು ಮಂಜೂರು ಮಾಡಿದೆ. ಡಿ.ಕೆ. ಶಿವಕುಮಾರ್ ಸೇರಿದಂತೆ ಐವರಿಗೆ ನ್ಯಾಯಾಲಯ ಮಧ್ಯಂತರ ಜಾಮೀನು ನೀಡಿದೆ.
ಆದಾಯ ತೆರಿಗೆ ವಂಚನೆ, ಹವಾಲಾ ಹಣ ಸಾಗಣೆ ಸೇರಿದಂತೆ ಹಲವು ಪ್ರಕರಣಗಳ ಆರೋಪ ಹೊತ್ತಿದ್ದ ಡಿಕೆಶಿ ವಿರುದ್ಧ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು 4ನೇ ದೂರು ದಾಖಲಿಸಿದ್ದರು. ಈ ಹಿನ್ನೆಲೆಯಲ್ಲಿ ಸಚಿವರು ಗುರುವಾರ ನ್ಯಾಯಾಲಯಕ್ಕೆ ಹಾಜರಾಗಿದ್ದರು.
ಡಿ.ಕೆ.ಶಿವಕುಮಾರ್, ಸಚಿನ್ ನಾರಾಯಣಉದ್ಯಮಿ ಸುನೀಲ್‌ ಕುಮಾರ್‌ ಶರ್ಮಾ, ಆಂಜನೇಯ ಹನುಮಂತಯ್ಯ ಮತ್ತು ಎನ್‌.ರಾಜೇಂದ್ರನ್‌ ಅವರುಗಳ  ವಿರುದ್ಧ ಪ್ರಕರಣ ದಾಖಲಾಗಿತ್ತು. ಆರೋಪಿಗಳ ಅರ್ಜಿ ಪರಿಗಣಿಸಿದ ನ್ಯಾಯಾಲಯ ಗೆ 5ದ ಸಾವಿರ ರೂ. ಭದ್ರತಾ ಬಾಂಡ್ ನೊಡನೆ ಷರತ್ತುಬದ್ದ ಜಾಮೀನು ನೀಡಿದೆ. ಮುಂದಿನ ವಿಚಾರಣೆಯನ್ನು ಸಪ್ಟೆಂಬರ್ 20ಕ್ಕೆ ಮುಂದೂಡಲಾಗಿದೆ.
ಜಾಮೀನು ಪಡೆದಬಳಿಕ ಡಿಕೆಶಿ ಸುದ್ದಿಗಾರರೊಡನೆ ಮಾತನಾಡಿ "ನ್ಯಾಯಾಲಯದ ಆದೇಶಕ್ಕೆ ತಲೆ ಬಾಗುತ್ತೇನೆ" ಎಂದಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com