ಸ್ಥಳೀಯ ಸಂಸ್ಥೆ ಚುನಾವಣೆ: ಆಗಸ್ಟ್ 29ಕ್ಕೆ ಮತದಾನ; ಸೆಪ್ಟೆಂಬರ್ 1ಕ್ಕೆ ಫಲಿತಾಂಶ

ಸ್ಥಳೀಯ ಸಂಸ್ಥೆ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದ್ದು 2 ಹಂತಗಳಲ್ಲಿ ಮತದಾನ ಪ್ರಕ್ರಿಯೆ ನಡೆಸಲು ನಿರ್ಧರಿಸಿದೆ, ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಬೆಂಗಳೂರು: ಸ್ಥಳೀಯ ಸಂಸ್ಥೆ ಚುನಾವಣೆಗೆ ರಾಜ್ಯ ಚುನಾವಣಾ ಆಯೋಗ ದಿನಾಂಕ ಪ್ರಕಟಿಸಿದ್ದು 2 ಹಂತಗಳಲ್ಲಿ ಮತದಾನ ಪ್ರಕ್ರಿಯೆ ನಡೆಸಲು ನಿರ್ಧರಿಸಿದೆ, 
ಈ ಸಂಬಂಧ ಸುದ್ದಿಗೋಷ್ಟಿ ನಡೆಸಿ ಮಾಹಿತಿ ನೀಡಿರುವ ರಾಜ್ಯ ಚುನಾವಣಾ ಆಯೋಗದ ಆಯುಕ್ತ ಶ್ರೀನಿವಾಸಾಚಾರಿ, ಆಗಸ್ಟ್ 29ಕ್ಕೆ ಮತದಾನ ನಡೆಯಲಿದ್ದು ಸೆಪ್ಟಂಬರ್ 1 ರಂದು ಫಲಿತಾಂಶ ಪ್ರಕಟವಾಗಲಿದೆ,
ಆಗಸ್ಟ್ 10 ರಂದು ಅಧಿಸೂಚನೆ ಹೊರಡಿಸಲಿದ್ದು, ಅಂದಿನಿಂದಲೇ ನಾಮಪತ್ರ ಸಲ್ಲಿಕೆ ಮಾಡಬಹುದಾಗಿದೆ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಇವಿಎಂ ಬಳಸಲು ಆಯೋಗ ನಿರ್ಧರಿಸಿದೆ. ಚುನಾವಣೆಗೆ ಪೊಲೀಸರು ಸೇರಿದಂತೆ ಸುಮಾರು 40 ಸಾವಿರ ಸಿಬ್ಬಂದಿ ನಿಯೋಜಿಸಲಾಗುವುದು ಎಂದು ಹೇಳಿದ್ದಾರೆ,
108 ಸ್ಥಳೀಯ ಸಂಸ್ಥೆಗಳ ಅವಧಿ ಮುಗಿದ ಹಿನ್ನೆಲೆಯಲ್ಲಿ ಚುನಾವಣಾ ದಿನ ಘೋಷಿಸಿದೆ, 29 ನಗರಸಭೆ, 53 ಪುರಸಭೆ ಹಾಗೂ 23 ಪಟ್ಟಣ ಪಂಚಾಯತಿಗಳಿಗೆ ಚುನಾವಣೆ ನಡೆಯಲಿದೆ.  
ಶಿವಮೊಗ್ಗ, ಮೈಸೂರು ಮತ್ತು ತುಮಕೂರು ಪಾಲಿಕೆಗಳ ಚುನಾವಣೆಗೆ ತಡೆಕೋರಿ ಹೈಕೋರ್ಟ್ ನಲ್ಲಿ ವಿಚಾರಣೆ ನಡೆಯುತ್ತಿದೆ, ಹೈಕೋರ್ಟ್ ಆದೇಶದ ಬಳಿಕ ಆ ಪಾಲಿಕೆಗಳ ಚುನಾವಣೆಗೆ ದಿನಾಂಕ ಪ್ರಕಟಿಸಲಾಗುವುದು ಎಂದು ಹೇಳಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com