ಮಾಲೂರು: ಶಾಲೆಯಿಂದ ಮನೆಗೆ ತೆರಳುತ್ತಿದ್ದ ಬಾಲಕಿ ಶವವಾಗಿ ಪತ್ತೆ

ಹೋಬಳಿ ಮಟ್ಟದ ಕ್ರೀಡಾಕೂಟ ಮುಗಿಸಿ ಮನೆಗೆ ತೆರಳುತ್ತಿದ್ದ 10ನೇ ತರಗತಿ ಬಾಲಕಿ ರೈಲ್ವೆ ಸೇತುವೆ ಮೇಲೆ ಶವವಾಗಿ ಪತ್ತೆಯಾಗಿದ್ದಾಳೆ. ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ
ಕೋಲಾರ: ಹೋಬಳಿ ಮಟ್ಟದ ಕ್ರೀಡಾಕೂಟ ಮುಗಿಸಿ ಮನೆಗೆ ತೆರಳುತ್ತಿದ್ದ 10ನೇ ತರಗತಿ ಬಾಲಕಿ ರೈಲ್ವೆ ಸೇತುವೆ ಮೇಲೆ ಶವವಾಗಿ ಪತ್ತೆಯಾಗಿದ್ದಾಳೆ. 
ಮೊಂಡು ಆಯುಧದಿಂದ ಬಾಲಕಿಗೆ ಹೊಡೆದು ಸಾಯಿಸಲಾಗಿದೆ ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಕೊಲೆಗೆ ಕಾರಣ ತಿಳಿದು ಬಂದಿಲ್ಲ.
ವಿದ್ಯಾರ್ಥಿನಿ ನಗರದ ಖಾಸಿ ಶಾಲೆಯ 10ನೇತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದಳು, ಬೆಳಗ್ಗೆ ಆಕೆಯ ತಂದೆ ಶಾಲೆಗೆ ಡ್ರಾಪ್ ಮಾಡಿದ್ದರು ಎಂದು ಕೇಂದ್ರ ವಲಯ ಐಜಿಪಿ ಬಿ.ದಯಾನಂದ್ ತಿಳಿಸಿದ್ದಾರೆ, ಮಾಲೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಗೆ ವಿಶೇಷ ತಂಡ ರಚಿಸಲಾಗಿದೆ. 
ವಿದ್ಯಾರ್ಥಿನಿ ಶವವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದು ವರದಿಗಾಗಿ ಕಾಯುತ್ತಿರುವುದಾಗಿ ತಿಳಿಸಿದ್ದಾರೆ.  ತಲೆಯ ಮೇಲೆ ಹೊಡೆದು ಸ್ಥಳದಲ್ಲಿಯೇ ಆಕೆಯನ್ನು ಕೊಲ್ಲಲಾಗಿದೆ ಎಂದು ಜಿಲ್ಲಾ ಸೂಪರಿಂಡೆಂಟ್ ಆಫ್ ಪೊಲೀಸ್ ಎಂ.ರಾಜೀವ್ ತಿಳಿಸಿದ್ದಾರೆ. 
ಮಾಲೂರು ಕ್ರೀಡಾಂಗಣದಲ್ಲಿ ಹೋಬಳಿ ಮಟ್ಟದ ಕ್ರೀಡಾಕೂಟ ನಡೆಯುತ್ತಿತ್ತು. ಥ್ರೋಬಾಲ್ ಸ್ಪರ್ಧೆಯಲ್ಲಿ ವಿದ್ಯಾರ್ಥಿನಿ ಭಾಗವಹಿಸಿದ್ದಳು ಎಂದು ಶಾಲೆ ಆಡಳಿತ ಮಂಡಳಿ ತಿಳಿಸಿದೆ, ಕ್ರೀಡಾಕೂಟ ಮುಗಿದ ಮೇಲೆ ಆಕೆ ಮನೆಗೆ ಮರಳುತ್ತಿದ್ದ ಸಮಯದಲ್ಲಿ ಆಕೆಯ ಕೊಲೆಯಾಗಿದೆ, 

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com