ನವದೆಹಲಿ: ನಾನು ಅಥವಾ ನನ್ನ ಪುತ್ರ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಜೀವಿತಾವಧಿಯಲ್ಲಿ ಉತ್ತರ ಕರ್ನಾಟಕ ಪ್ರತ್ಯೇಕ ರಾಜ್ಯದ ಬೇಡಿಕೆಯನ್ನು ಈಡೇರಿಸಲು ಸಾಧ್ಯವಿಲ್ಲ ಎಂದು ಮಾಜಿ ಪ್ರಧಾನಿ, ಜೆಡಿಎಸ್ ಮುಖಂಡ ಎಚ್.ಡಿ. ದೇವೇಗೌಡ ಹೇಳಿದ್ದಾರೆ. ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯ ಮಾಡುವುದಕ್ಕೆ ನಮ್ಮ ಬೆಂಬಲವಿಲ್ಲ, ಈ ಬೇಡಿಕೆಗೆ ಬಿಜೆಪಿ ಸಹ ಪ್ರಚೋದನೆ ನೀಡಬಾರದೆಂದು ಅವರು ಮನವಿ ಮಾಡಿದ್ದಾರೆ.