ಸರ್ಕಾರಿ ಭೂಮಿ ರಕ್ಷಿಸುವಲ್ಲಿ ವಿಫಲ: ಅಧಿಕಾರಿಗೆ ಲೋಕಾಯುಕ್ತ ನೋಟಿಸ್

ಸರ್ಕಾರಿ ಭೂಮಿ ರಕ್ಷಣ ಮಾಡುವಲ್ಲಿ ವಿಫಲರಾಗಿರುವ ಬೆಂಗಳೂರು ನಗರ ಜಿಲ್ಲಾ ವಿಶೇಷ ಉಪ ಆಯುಕ್ತರಿಗೆ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್ ಶೆಟ್ಟಿಯವರು ಶನಿವಾರ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ...
ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್ ಶೆಟ್ಟಿ
ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್ ಶೆಟ್ಟಿ
Updated on
ಬೆಂಗಳೂರು: ಸರ್ಕಾರಿ ಭೂಮಿ ರಕ್ಷಣ ಮಾಡುವಲ್ಲಿ ವಿಫಲರಾಗಿರುವ ಬೆಂಗಳೂರು ನಗರ ಜಿಲ್ಲಾ ವಿಶೇಷ ಉಪ ಆಯುಕ್ತರಿಗೆ ಲೋಕಾಯುಕ್ತ ನ್ಯಾಯಮೂರ್ತಿ ಪಿ. ವಿಶ್ವನಾಥ್ ಶೆಟ್ಟಿಯವರು ಶನಿವಾರ ಶೋಕಾಸ್ ನೋಟಿಸ್ ಜಾರಿ ಮಾಡಿದ್ದಾರೆ.
ಪ್ರಕರಣ ಸಂಬಂಧ ಈ ಹಿಂದೆ ಕೂಡ ಲೋಕಾಯುಕ್ತ ನ್ಯಾಯಮೂರ್ತಿಗಳು ಅಧಿಕಾರಿಗೆ ನೋಟಿಸ್ ಜಾರಿ ಮಾಡಿದ್ದರು. 2018ರ ಜನವರಿ 25ರೊಳಗಾಗಿ ವಸ್ತುಸ್ಥಿತಿ ವರದಿ ಸಲ್ಲಿಸುವಂತೆ ಸೂಚಿಸಿದ್ದರು. ನೋಟಿಸ್ ಜಾರಿ ಮಾಡಿದ್ದರೂ ಅಧಿಕಾರಿ ಯಾವುದೇ ರೀತಿಯ ಪ್ರತಿಕ್ರಿಯೆಗಳನ್ನು ನೀಡಿರಲಿಲ್ಲ. ಅಧಿಕಾರಿಯ ಪರವಾಗಿಯೂ ಯಾರೊಬ್ಬರೂ ಪ್ರತಿಕ್ರಿಯೆ ನೀಡಿಲ್ಲ. 
ಈ ಹಿನ್ನಲೆಯಲ್ಲಿ ಅಧಿಕಾರಿಯ ವರ್ತನೆಯನ್ನು ಗಂಭೀರವಾಗಿ ಪರಿಗಣಿಸಿರುವ ಲೋಕಾಯುಕ್ತ, ಇದೇ ಮೊದಲ ಬಾರಿಗೆ ಅಧಿಕಾರಿಯೊಬ್ಬರಿಗೆ ಶೋಕಾಸ್ ನೋಟಿಸ್ ಮಾಡಿ ಮಾಡಿದೆ ಎಂದು ತಿಳಿದುಬಂದಿದೆ. 
ಬೆಂಗಳೂರು ನಗರ ಜಿಲ್ಲೆ ವಿಶೇಷ ಉಪ ಆಯುಕ್ತರಿಗೆ ಶೋಕಾಸ್ ನೋಟಿಸ್ ಜಾರಿ ಮಾಡುವಂತೆ ಆದೇಶಿಸಲಾಗಿದೆ. 2018 ಆ.28ರಂದು ನಡೆಯುವ ವಿಚಾರಣೆಗೆ ಹಾಜರಾಗುವಂತೆ ತಿಳಿಸಲಾಗಿದ್ದು, ಮೂರು ವಾರಗಳೊಳಗಾಗಿ ಸ್ಪಷ್ಟನೆ ನೀಡುವಂತೆಯೂ ಸೂಚಿಸಲಾಗಿದೆ ಎಂದು ಲೋಕಾಯುಕ್ತರು ತಿಳಿಸಿದ್ದಾರೆ. 

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

X
Kannada Prabha
www.kannadaprabha.com