ರಾಜ್ಯ

ಹಾರಂಗಿ ನಾಲೆಗೆ ಬಿದ್ದ ಕಾರು​: ಒಂದೇ ಕುಟುಂಬದ ನಾಲ್ವರು ಜಲಸಮಾಧಿ

ಹಾರಂಗಿ ನಾಲೆಗೆ ಬಿದ್ದ ಕಾರು​: ಒಂದೇ ಕುಟುಂಬದ ನಾಲ್ವರು ಜಲಸಮಾಧಿ
ನಾಲೆಗೆ ಬಿದ್ದ ಕಾರು
Published On :
ಮೈಸೂರು: ಮಾರುತಿ ಕಾರೊಂದು ಹಾರಂಗಿ ಕಾಲುವೆಗೆ ಬಿದ್ದು ಒಂದೇ ಕುಟುಂಬದ ನಾಲ್ವರು ಮೃತಪಟ್ಟಿರುವ ದಾರುಣ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲ್ಲೂಕಿನ ದೊಡ್ಡ ಕಮರಹಳ್ಳಿ ಗ್ರಾಮದಲ್ಲಿ ನಡೆದಿದೆ. 
ನಿನ್ನೆ ರಾತ್ರಿಯೇ ಈ ಅಪಘಾತ ಸಂಭವಿಸಿದ್ದು, ಮೃತರು ಕೊಡಗು ಜಿಲ್ಲೆಯ ನಾಪೋಕ್ಲು ಗ್ರಾಮದ ಪಳನಿಸ್ವಾಮಿ, ಆತನ ಪತ್ನಿ ಸಂಜು, ಪುತ್ರ ನಿಖಿತ್, ಪುತ್ರಿ ಪೂರ್ಣಿಮಾ ಎಂದು ಗುರುತಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇಂದು ಮೃತದೇಹಗಳನ್ನು ಹೊರತೆಗಯಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ ಎಂದು ಬೆಟ್ಟದಪುರ ಪೊಲೀಸರು ತಿಳಿಸಿದ್ದಾರೆ.
ಈ ನಾಲ್ವರು ಕಮರಹಳ್ಳಿ ಬಳಿ ಇರುವ ದೇವಾಲಯಕ್ಕೆ ಪೂಜೆಗಾಗಿ ತೆರಳುತ್ತಿದ್ದರು ಎನ್ನಲಾಗಿದ್ದು, ದುರ್ಘಟನೆಗೆ ಚಾಲಕನ ನಿರ್ಲಕ್ಷವೇ ಕಾರಣ ಎನ್ನಲಾಗಿದೆ.

Follow KannadaPrabha channel on WhatsApp

Subscribe to KannadaPrabha YouTube Channel and watch Videos

Download the KannadaPrabha News app to follow the latest news updates

Subscribe and Receive exclusive content and updates on your favorite topics

Disclaimer : ಕಾಮೆಂಟ್‌ಗಳಲ್ಲಿ ವ್ಯಕ್ತಪಡಿಸಿದ ಅಭಿಪ್ರಾಯಗಳು ಅವುಗಳನ್ನು ಪೋಸ್ಟ್ ಮಾಡುವ ವ್ಯಕ್ತಿಯ ಸಂಪೂರ್ಣ ಜವಾಬ್ದಾರಿಯಾಗಿದೆ; ಅವು kannadaprabha.com ನ ಅಭಿಪ್ರಾಯಗಳನ್ನು ಪ್ರತಿಬಿಂಬಿಸುವುದಿಲ್ಲ. ಒಬ್ಬ ವ್ಯಕ್ತಿ, ಸಮುದಾಯ, ಧರ್ಮ ಅಥವಾ ದೇಶದ ವಿರುದ್ಧ ಅವಹೇಳನಕಾರಿ ಅಥವಾ ಅಶ್ಲೀಲವಾದ ಯಾವುದೇ ಕಾಮೆಂಟ್‌ಗಳು ಭಾರತ ಸರ್ಕಾರದ ಮಾಹಿತಿ ತಂತ್ರಜ್ಞಾನ ನೀತಿಯ ಅಡಿಯಲ್ಲಿ ಶಿಕ್ಷಾರ್ಹವಾಗಿವೆ. ಅಂತಹ ಕಾಮೆಂಟ್‌ಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು.