ಗೌರಿ ಲಂಕೇಶ್ ಹತ್ಯೆ : ಮೂವರು ಶಂಕಿತರಿಗೆ ನ್ಯಾಯಾಂಗ ಬಂಧನ

ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲಾಗಿದ್ದ ಮೂವರು ಆರೋಪಿಗಳನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಇಂದು ತೀರ್ಪು ನೀಡಿದೆ.
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಪತ್ರಕರ್ತೆ ಹಾಗೂ ಸಾಮಾಜಿಕ ಹೋರಾಟಗಾರ್ತಿ ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ  ಬಂಧಿಸಲಾಗಿದ್ದ ಮೂವರು ಆರೋಪಿಗಳನ್ನು  ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿ ನ್ಯಾಯಾಲಯ ಇಂದು ತೀರ್ಪು ನೀಡಿದೆ.

ಹುಬ್ಬಳ್ಳಿಯ ಗಣೇಶ್ ಮಿಸ್ಕಿನ್  , ಅಮಿತ್ ರಾಮಚಂದ್ರ ಬಾಡಿ ಹಾಗೂ ಮಡಿಕೇರಿಯ ರಾಜೇಶ್ ಡಿ ಬಂಗೇರಾ ಅವರನ್ನು ಮೂರನೇ ಎಸಿಎಂಎಂ ನ್ಯಾಯಾಲಯದ ಎದುರು ಹಾಜರುಪಡಿಸಲಾಯಿತು.

 ಕಸ್ಟಡಿ ಅವಧಿ ಮುಕ್ತಾಯಗೊಂಡಿದ್ದರಿಂದ ಪೊಲೀಸರು ಮತ್ತೆ ಅವಧಿ ವಿಸ್ತರಣೆಗೆ ಕೋರದ ಹಿನ್ನೆಲೆಯಲ್ಲಿ  ನ್ಯಾಯಾಲಯ  ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ.  ವಿಚಾರಣೆ ವೇಳೆ ಎಸ್ ಐಟಿ ಅಧಿಕಾರಿಗಳು ತಮ್ಮ ಮೇಲೆ ಮಾನಸಿಕವಾಗಿ ಕಿರುಕುಳ ನೀಡಿದ್ದಾರೆ ಎಂದು ಮಿಸ್ಕಿನ್ ಮತ್ತು ಬಾಡ್ಡಿ  ನ್ಯಾಯಾಧೀಶರ ಎದುರು ಆರೋಪಿಸಿದ್ದಾರೆ.

 ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್ ಐಟಿ ಅಧಿಕಾರಿಗಳು  ಆರೋಪಿಗಳಿಗೆ ಕಿರುಕುಳ ನೀಡುತ್ತಿದ್ದಾರೆ ಎಂದು ಆರೋಪಿಗಳ ಪರ ವಕೀಲ ಎನ್. ಪಿ. ಅಮೃತೇಶ್ ಆರೋಪಿಸಿದರು. ಆದರೆ, ನಾವು ಯಾವುದೇ ರೀತಿಯ ಕಿರುಕುಳ ನೀಡಿಲ್ಲ ಎಂದು ಅಧಿಕಾರಿಗಳು ಹೇಳಿದರು.
ಆರೋಪಿಗಳ ವೈದ್ಯಕೀಯ ಪರೀಕ್ಷೆ ನಡೆಸುವಂತೆ ಹಾಗೂ  ನ್ಯಾಯಾಂಗ ಬಂಧನಕ್ಕೆ ಒಪ್ಪಿಸುವಂತೆ  ನ್ಯಾಯಾಲಯ ತೀರ್ಪು ನೀಡಿತು.ತದನಂತರ  ಅವರನ್ನು ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹಕ್ಕೆ ಕರೆದೊಯ್ಯಲಾಯಿತು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com