ಆರ್. ಅಶೋಕ
ಆರ್. ಅಶೋಕ

ಡ್ರಗ್ಸ್ ಹಾವಳಿ ನಿಯಂತ್ರಿಸುವಲ್ಲಿ ಸರ್ಕಾರ ವಿಫಲ: ಪ್ರತಿಭಟನೆ ಎಚ್ಚರಿಕೆ ನೀಡಿದ ಬಿಜೆಪಿ

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಡ್ರಗ್ಸ್ ಹಾವಳಿ ಮಿತಿ ಮೀರಿದ್ದು, ಅದನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಆರೋಪಿಸಿದೆ, ...
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ  ಡ್ರಗ್ಸ್ ಹಾವಳಿ ಮಿತಿ ಮೀರಿದ್ದು, ಅದನ್ನು ನಿಯಂತ್ರಿಸುವಲ್ಲಿ ಸರ್ಕಾರ ವಿಫಲವಾಗಿದೆ  ಎಂದು ಬಿಜೆಪಿ ಆರೋಪಿಸಿದೆ, ಡ್ರಗ್ಸ್ ದಂಧೆಯನ್ನು ಮಟ್ಟಹಾಕದಿದ್ದರೇ ಮುಂದಿನ ದಿನಗಳಲ್ಲಿ ಪ್ರತಿಭಟನೆ ನಡೆಸುವುದಾಗಿ ಬಿಜೆಪಿ ಎಚ್ಚರಿಕೆ ನೀಡಿದೆ.
ಬೆಂಗಳೂರಿನಲ್ಲಿ ಡ್ರಗ್ಸ್ ಹಾವಳಿ ಹೆಚ್ಚಾದ ಹಿನ್ನೆಲೆ ನಗರ ಪೊಲೀಸ್ ಆಯುಕ್ತರನ್ನು ಭೇಟಿ ಮಾಡಿದ ಮಾಜಿ ಡಿಸಿಎಂ ಆರ್.ಅಶೋಕ್ ನೇತೃತ್ವದ ಬಿಜೆಪಿ ನಿಯೋಗ, ಬೆಂಗಳೂರಲ್ಲಿ ಈ ಮಾಫಿಯಾವನ್ನೇ ಬುಡ ಸಮೇತ ಕಿತ್ತು ಹಾಕುವಂತೆ ಮನವಿ ಮಾಡಿದೆ.
ಈ ವೇಳೆ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬೆಂಗಳೂರಿನಲ್ಲಿ ಹೆಚ್ಚುತ್ತಿರುವ ಡ್ರಗ್ಸ್‌ ಮಾಫಿಯಾ ವಿರುದ್ಧ ಕ್ರಮ ಕೈಗೊಳ್ಳುವಲ್ಲಿ ಸರ್ಕಾರ ಸಂಪೂರ್ಣ ವಿಫಲವಾಗಿದೆ. ಡ್ರಗ್ ಮಾಫಿಯಾ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಗೃಹ ಸಚಿವ ಪರಮೇಶ್ವರ್  ಭರವಸೆ ನೀಡಿದ್ದರು. ಆದರೆ ಈವರೆಗೆ ಯಾವುದೇ ಪ್ರಗತಿ ಕಂಡಿಲ್ಲ ಎಂದರು. ಪೊಲೀಸ್ ಇಲಾಖೆ ಪರಿಣಾಮಕಾರಿಯಾಗಿ ಕೆಲಸ ಮಾಡಿಲ್ಲ. ಯಾವುದೇ ಪ್ರಗತಿ ಕಂಡಿಲ್ಲ. ಹೀಗಾಗಿ ನಿಯೋಗದಿಂದ ನಗರ ಪೊಲೀಸ್ ಆಯುಕ್ತರಿಗೆ ಮನವಿ ಮಾಡಿದ್ದೇವೆ ಎಂದರು.
ಡ್ರಗ್ ಮಾಫಿಯಾದಲ್ಲಿ ಭಾಗಿಯಾಗಿರುವ ವಿದೇಶಿ ವಿದ್ಯಾರ್ಥಿಗಳನ್ನು ಗಡಿಪಾರು ಮಾಡುವುದಾಗಿ ಹೇಳಿದ್ದರು. ಆದರೆ ಇದುವರೆಗೂ ಕ್ರಮ ಕೈಗೊಂಡಿಲ್ಲ. ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣ ಡ್ರಗ್ಸ್‌ ಅನ್ನು ವಿದೇಶಗಳಿಗೆ ಸಾಗಿಸಲು ವೇದಿಕೆಯಾಗಿದೆ ಎಂದರು.

Related Stories

No stories found.

Advertisement

X
Kannada Prabha
www.kannadaprabha.com