ವಿಲೀನಗೊಳ್ಳಲಿವೆ ರಾಜ್ಯದ 14 ಸಾವಿರ ಸರ್ಕಾರಿ ಶಾಲೆಗಳು

ಶಿಕ್ಷಣ ತಜ್ಞರು, ಶಿಕ್ಷಕರು ಮತ್ತು ಇತರ ಪಾಲುದಾರ ನಿರ್ವಹಣೆದಾರರ ವಿರೋಧದ ಹೊರತಾಗಿಯೂ ...
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ

ಬೆಂಗಳೂರು: ಶಿಕ್ಷಣ ತಜ್ಞರು, ಶಿಕ್ಷಕರು ಮತ್ತು ಇತರ ಪಾಲುದಾರ ನಿರ್ವಹಣೆದಾರರ ವಿರೋಧದ ಹೊರತಾಗಿಯೂ ರಾಜ್ಯ ಪ್ರಾಥಮಿಕ ಮತ್ತು ಪ್ರೌಢ  ಶಿಕ್ಷಣ ಇಲಾಖೆ ಸರ್ಕಾರಿ ಶಾಲೆಗಳನ್ನು ವಿಲೀನಗೊಳಿಸಲು ಸರ್ಕಾರಿ ಶಾಲೆಗಳ ಪಟ್ಟಿಯನ್ನು ಪಡೆಯುತ್ತಿದೆ.

ಶಿಕ್ಷಣ ಇಲಾಖೆಯಿಂದ ಸಿಕ್ಕಿರುವ ಮಾಹಿತಿ ಪ್ರಕಾರ, ವಿಲೀನಗೊಳಿಸುವ ಶಾಲೆಗಳ ಜಿಲ್ಲಾವಾರು ಪಟ್ಟಿಯನ್ನು ಗುರುತಿಸಿ ಅವುಗಳ ಹೆಸರುಗಳನ್ನು ನೀಡಲಾಗಿದೆ. ಇಂತಹ 14 ಸಾವಿರಕ್ಕೂ ಹೆಚ್ಚು ಶಾಲೆಗಳ ಪಟ್ಟಿಯ ಹೆಸರು ನ್ಯೂ ಇಂಡಿಯನ್ ಎಕ್ಸ್ ಪ್ರೆಸ್ ಪತ್ರಿಕೆಗೆ ಲಭ್ಯವಾಗಿದೆ.

ಇತ್ತೀಚೆಗೆ ಬಜೆಟ್ ನಲ್ಲಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ, 28 ಸಾವಿರಕ್ಕೂ ಅಧಿಕ ಸರ್ಕಾರಿ ಮತ್ತು ಅನುದಾನಿತ ಶಾಲೆಗಳನ್ನು ವಿಲೀನಗೊಳಿಸಲಾಗುವುದು ಎಂದು ಘೋಷಿಸಿದ್ದರು. ಇದೀಗ ಶಿಕ್ಷಣ ಇಲಾಖೆ ಪ್ರತಿ ಜಿಲ್ಲೆಯಲ್ಲಿ ವಿಲೀನಗೊಳಿಸುವ ಶಾಲೆಗಳ ಪಟ್ಟಿಯನ್ನು ಸಿದ್ಧಪಡಿಸಿದೆ.

ವಿದ್ಯಾರ್ಥಿಗಳ ಕೊರತೆ ಮತ್ತು ಆದ್ಯತೆ ಆಧಾರದ ಮೇಲೆ 14,712 ಶಾಲೆಗಳನ್ನು ಗುರುತಿಸಲಾಗಿದೆ. ಈ ಶಾಲೆಗಳು ಒಂದು ಶಾಲೆಯಿಂದ ಇನ್ನೊಂದು ಶಾಲೆಗೆ 1 ಕಿಲೋ ಮೀಟರ್ ಅಂತರದಲ್ಲಿವೆ.

ವೈರುಧ್ಯವೆಂದರೆ ಮುಖ್ಯಮಂತ್ರಿ ಮತ್ತು ಉಪ ಮುಖ್ಯಮಂತ್ರಿ ಅವರ ತವರು ಜಿಲ್ಲೆಗಳಲ್ಲಿ ಅತಿ ಹೆಚ್ಚು ಶಾಲೆಗಳು ವಿಲೀನಗೊಳ್ಳುತ್ತಿವೆ. ರಾಜ್ಯದ 14 ಸಾವಿರ ಶಾಲೆಗಳಲ್ಲಿ 25,231 ಶಿಕ್ಷಕರು ಕೆಲಸ ಮಾಡುತ್ತಿದ್ದಾರೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com