ಕಳಚಿತು ಸಾರಸ್ವತ ಲೋಕದ ಮತ್ತೊಂದು ಕೊಂಡಿ: ಪ್ರಸಿದ್ಧ ಕವಿ ಡಾ. ಸುಮತೀಂದ್ರ ನಾಡಿಗ್ ಇನ್ನಿಲ್ಲ

ಪ್ರಸಿದ್ಧ ಹಿರಿಯ ಕವಿ ಡಾ. ಸುಮತೀಂದ್ರ ನಾಡಿಗ್ (83 ವರ್ಷ) ಇಂದು ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಕವಿ ಇಂದು ಬೆಳಗ್ಗೆ 6.25ಕ್ಕೆ ಸಾವನ್ನಪ್ಪಿದ್ದಾರೆ...
ಸುಮತೀಂದ್ರ ನಾಡಿಗ್
ಸುಮತೀಂದ್ರ ನಾಡಿಗ್
ಬೆಂಗಳೂರು: ಪ್ರಸಿದ್ಧ  ಹಿರಿಯ ಕವಿ  ಡಾ. ಸುಮತೀಂದ್ರ ನಾಡಿಗ್  (83 ವರ್ಷ) ಇಂದು ನಿಧನರಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಆಸ್ಪತ್ರೆಗೆ ದಾಖಲಾಗಿದ್ದ ಕವಿ ಇಂದು ಬೆಳಗ್ಗೆ 6.25ಕ್ಕೆ ಸಾವನ್ನಪ್ಪಿದ್ದಾರೆ.
ಹೃದಯದ ಸಮಸ್ಯೆ, ಕಿಡ್ನಿ ಸಮಸ್ಯೆ ಹಾಗೂ ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಇವರು ಚಿಕಿತ್ಸೆ ಪಡೆಯುತ್ತಿದ್ದರು. ಕಳೆದ ಮಂಗಳವಾರ ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು.
ಪುಟ್ಟೇನಹಳ್ಳಿ ನಿವಾಸದಲ್ಲಿ ಅವರ ಪಾರ್ಥೀವ ಶರೀರದ ಅಂತಿಮ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ ಎಂದು ತಿಳಿಗದು ಬಂದಿದೆ,  
ಚಿಕ್ಕಮಗಳೂರಿನ ಕಳಸದಲ್ಲಿ ಜನಿಸಿದ್ದ ಸುಮತೀಂದ್ರ ನಾಡಿಗ್​  ಅಧ್ಯಾಪಕರಾಗಿ ಕಾರ್ಯ ನಿರ್ವಹಿಸಿದವರು. ಕಾವ್ಯ, ಕಥನ, ಮಕ್ಕಳ ಸಾಹಿತ್ಯ, ಅನುವಾದ, ವಿಮರ್ಶೆ ಮುಂತಾದ ಸಾಹಿತ್ಯ ಪ್ರಕಾರಗಳಲ್ಲಿ ಸೇವೆ ಸಲ್ಲಿಸಿದ್ದರು. 
ನ್ಯಾಷನಲ್ ಬುಕ್ ಟ್ರಸ್ಟ್ ಆಫ್ ಇಂಡಿಯಾದ ಮಾಜಿ ಅಧ್ಯಕ್ಷರಾಗಿರುವ ಸುಮತೀಂದ್ರ ನಾಡಿಗ್ ತಮ್ಮ ಪತ್ನಿ ಮಾಲತಿ, ಇಬ್ಬರು ಪುತ್ರಿಯರು ಮತ್ತು ಮಗನನ್ನು ಅಗಲಿದ್ದಾರೆ.
ಮೈಸೂರು ವಿಶ್ವವಿದ್ಯಾನಿಲಯ ಹಾಗೂ ಅಮೆರಿಕದ ಫಿಲೆಡೆಲ್ಫಿಯಾ ವಿಶ್ವವಿದ್ಯಾಲಯಗಳಿಂದ ಇಂಗ್ಲಿಷ್ ಎಂ.ಎ. ಪದವಿಯನ್ನು ಪಡೆದುಕೊಂಡಿದ್ದರು. 1985ರಲ್ಲಿ ಬೆಂಗಳೂರು ವಿಶ್ವವಿದ್ಯಾನಿಲಯದಿಂದ `ಬೇಂದ್ರೆಯವರ ಕಾವ್ಯದ ವಿಭಿನ್ನ ನೆಲೆಗಳು’ ಎನ್ನುವ ಕಥಾಸಂಕಲದಿಂದಾಗಿ ಗೌರವ ಡಾಕ್ಟರೇಟನ್ನು ಸಹ ಪಡೆದಿದ್ದರು. ಇವರು ದ.ರಾ.ಬೇಂದ್ರೆ, ಗೋಪಾಲಕೃಷ್ಣ ಅಡಿಗ ಮತ್ತು ಕೆ.ಎಸ್.ನರಸಿಂಹಸ್ವಾಮಿಯವರ ಕಾವ್ಯದ ಬಗ್ಗೆ ವಿಶೇಷವಾದ ಅಧ್ಯಯನ ನಡೆಸಿದ್ದರು.

ಕೇಂದ್ರ ಸಾಹಿತ್ಯ ಅಕಾಡೆಮಿಯ ಬಾಲ ಸಾಹಿತ್ಯ ಪುರಸ್ಕಾರ, ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಸೇರಿದಂತೆ ಹಲವು ಪ್ರಶಸ್ತಿ ಪುರಸ್ಕಾರಗಳಿಗೆ ಭಾಜನರಾಗಿದ್ದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com