ಗೋಕರ್ಣ ಮಹಾಬಲೇಶ್ವರ ದೇವಾಲಯ ಹಸ್ತಾಂತರ ಆದೇಶ ರದ್ದು: ಹೈಕೋರ್ಟ್ ಮಹತ್ವದ ತೀರ್ಪು

ಗೋಕರ್ಣದ ಪ್ರಸಿದ್ದ ಮಹಾಬಲೇಶ್ವರ ದೇವಾಲಯವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರ ಮಾಡಿದ್ದ ಸರ್ಕಾರದ ಆದೇಶವನ್ನು ರದ್ದುಪಡಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಗೋಕರ್ಣ ಮಹಾಬಲೇಶ್ವರ ದೇವಾಲಯ ಹಸ್ತಾಂತರ ಆದೇಶ ರದ್ದು: ಹೈಕೋರ್ಟ್ ಮಹತ್ವದ ತೀರ್ಪು
ಗೋಕರ್ಣ ಮಹಾಬಲೇಶ್ವರ ದೇವಾಲಯ ಹಸ್ತಾಂತರ ಆದೇಶ ರದ್ದು: ಹೈಕೋರ್ಟ್ ಮಹತ್ವದ ತೀರ್ಪು
ಗೋಕರ್ಣ: ಗೋಕರ್ಣದ ಪ್ರಸಿದ್ದ ಮಹಾಬಲೇಶ್ವರ ದೇವಾಲಯವನ್ನು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರ ಮಾಡಿದ್ದ ಸರ್ಕಾರದ ಆದೇಶವನ್ನು ರದ್ದುಪಡಿಸಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

2008ರಲ್ಲಿ ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದ ವೇಳೆ ಮಹಾಬಲೇಶ್ವರ ದೇವಾಲಯವನ್ನು ರಾಜ್ಯ ಸರ್ಕಾರವು ರಾಮಚಂದ್ರಾಪುರ ಮಠಕ್ಕೆ ಹಸ್ತಾಂತರ ಮಾಡಿತ್ತು 2008, ಮಾರ್ಚ್ 12ರಂದು ಈ ಹಸ್ತಾಂತರ ನಡೆದಿತ್ತು.

ಆದರೆ ಇದನ್ನು ಪ್ರಶ್ನಿಸಿ ಬಾಲಚಂದ್ರ ದೀಕ್ಷಿತ್ ಹಾಗೂ ನರಹರಿ ಕೃಷ್ಣ ಹೆಗಡೆ ನ್ಯಾಯಾಲಯದ ಮೊರೆ ಹೋಗಿದ್ದರು. ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದೇವಾಲಯವನ್ನು ಮಠದ ಅಧೀನಗೊಳಿಸದೆ ಪುನಃಅ ಸರ್ಕಾರದ ಆಡಳಿತಕ್ಕೆ ತೆಗೆದುಕೊಳ್ಳಬೇಕು ಎಂದು ಮನವಿ ಮಾಡಿದ್ದರು.

ಪಿಐಎಲ್ ಅನ್ನು ವಿಚಾರಣೆ ನಡೆಸಿದ ಹೈಕೋರ್ಟ್ ವಿಭಾಗಿಯ ಪೀಠ ವಿಚಾರಣೆ ಪೂರ್ಣಗೊಳಿಸಿ ತೀರ್ಪು ಕಾಯ್ದಿರಿಸಿತ್ತು. ಇಂದು (ಶುಕ್ರವಾರ) ಈ ತೀರ್ಪು ಬಂದಿದ್ದು ರಾಮಚಂದ್ರಾಪುರ ಮಠಕ್ಕೆ ದೇವಾಲಯ ಹಸ್ತಾಂತರಿಸಿದ್ದ ಸರ್ಕಾರದ ಆದೇಶವನ್ನು ಅಮಾನ್ಯವಾಗಿದೆ. ಇದರಿಂದ ರಾಮಚಂದ್ರಾಪುರ ಮಠಕ್ಕೆ ಭಾರೀ ಹಿನ್ನಡೆಯಾದಂತಾಗಿದೆ.

ದೇವಾಲಯವು ಧಾರ್ಮಿಕ ದತ್ತಿ ಇಲಾಖೆಯ ಸುಪರ್ದಿಯಲ್ಲಿಯೇ ಮುಂದುವರಿಯಬೇಕು. ತಕ್ಷಣ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಉಸ್ತುವಾರಿ ಸಮಿತಿ ನೇಮಕವಾಗಬೇಕು. ಸುಪ್ರೀಂ ಕೋರ್ಟ್ ನಿವೃತ್ತ ನ್ಯಾಯಮೂರ್ತಿ ಬಿ.ಎನ್. ಕೃಷ್ಣಪ್ಪ ಸಲಹೆಗಾರರಾಗಿ ನೇಮಕವಾಗಬೇಕು ಎಂದು ಹೈಕೋರ್ಟ್ ಸೂಚಿಸಿದೆ.

ಸರ್ಕಾರದ ಆದೇಶವು ಲೋಪದೊಷದಿಂದ ಕೂಡಿದೆ ಎಂದು ನ್ಯಾಯಾಲಯ ಅಭಿಪ್ರಾಯ ಪಟ್ಟಿದೆ. ಹೈಕೋರ್ಟ್ ಆದೇಶದಂತೆ  ದೇವಾಲಯವು ಮತ್ತೆ  ಕರ್ನಾಟಕ ಧಾರ್ಮಿಕ ದತ್ತಿ ಇಲಾಖೆ ಕಾಯ್ದೆ 1997ಕ್ಕೆ ಪುನಃಅ ಒಳಪಡಲಿದೆ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com