ರಾಜ್ಯ ಮುಕ್ತ ವಿವಿಗೆ ಯುಜಿಸಿ ಮಾನ್ಯತೆ: ಪ್ರಸಕ್ತ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ

ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ- ( ಯುಜಿಸಿ) ಮಾನ್ಯತೆ ನೀಡಿದ್ದು, ಪ್ರಸಕ್ತ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡಿದೆ.
ರಾಜ್ಯ ಮುಕ್ತ ವಿವಿ
ರಾಜ್ಯ ಮುಕ್ತ ವಿವಿ

ಬೆಂಗಳೂರು: ಕರ್ನಾಟಕ ಮುಕ್ತ ವಿಶ್ವವಿದ್ಯಾಲಯಕ್ಕೆ ವಿಶ್ವವಿದ್ಯಾಲಯ ಧನಸಹಾಯ ಆಯೋಗ- ( ಯುಜಿಸಿ) ಮಾನ್ಯತೆ ನೀಡಿದ್ದು, ಪ್ರಸಕ್ತ ಶೈಕ್ಷಣಿಕ ಸಾಲಿಗೆ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡಿದೆ.

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವಾಲಯ ಹಾಗೂ ಯುಜಿಸಿ ಇದನ್ನು ದೃಢಪಡಿಸಿದ್ದು, 2018-19 ನೇ ಸಾಲಿನ ಶೈಕ್ಷಣಿಕ ವರ್ಷದಿಂದಲೇ ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡುವಂತೆ ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ದಿ ಸಚಿವಾಲಯ  ಯುಜಿಸಿಗೆ ಶಿಫಾರಸ್ಸು ಮಾಡಿದೆ ಎಂದು ಮೂಲಗಳಿಂದ ತಿಳಿದುಬಂದಿದೆ.

ಇನ್ನೂ ಕೆಲವೇ ದಿನಗಳಲ್ಲಿ  ಅಧಿಕೃತ ಆದೇಶ ಹೊರಡಿಸಲಾಗುವುದು ಎಂದು  ಯುಜಿಸಿಯ ಅಧಿಕಾರಿಗಳು ತಿಳಿಸಿದ್ದಾರೆ.ಈ ನಿರ್ಧಾರದ ಬಗ್ಗೆ ಗೊತ್ತಾಗಿದೆ. ಆದರೆ, ಅಧಿಕೃತ ಮಾಹಿತಿ ಇನ್ನೂ ಬಂದಿಲ್ಲ ಎಂದು ರಾಜ್ಯ ಮುಕ್ತ ವಿವಿ ಕುಲಪತಿ ಪ್ರೋಫೆಸರ್ ಶಿವಲಿಂಗಯ್ಯ ಹೇಳಿದ್ದಾರೆ.

ಅಧಿಕೃತ ಆದೇಶ ಬಂದ ನಂತರ ಪ್ರವೇಶದ ಬಗ್ಗೆ ಸಾರ್ವಜನಿಕ ಅಧಿಸೂಚನೆ ಹೊರಡಿಸಲಾಗುವುದು. ಕೆಲ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಬೇಕಾಗುತ್ತದೆ ಎಂದು ಅವರು ತಿಳಿಸಿದ್ದಾರೆ.

 ರಾಜ್ಯ ಮುಕ್ತ ವಿವಿಯಲ್ಲಿ 2015-16, 2016-17,  2017-18 ನೇ ಸಾಲಿನಲ್ಲಿ  ವಿದ್ಯಾರ್ಥಿಗಳ ಪ್ರವೇಶಕ್ಕೆ ಅನುಮತಿ ನೀಡಿರಲಿಲ್ಲ.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com