ಖಾಸಗಿ ವಿವಿ ಗಳಿಂದ ಕಲಿಯಿರಿ: ಉಪ ಕುಲಪತಿ, ರಿಜಿಸ್ಟ್ರಾರ್ ಗಳಿಗೆ ಸಚಿವ ದೇವೇಗೌಡ ಛಾಟಿಯೇಟು

ರಾಜ್ಯ ಸರ್ಕಾರದ ವಿಶ್ವವಿದ್ಯಾಲಯಗಳ ಕಾರ್ಯವೈಖರಿ ಬಗ್ಗೆ ಉನ್ನತ ಶಿಕ್ಷಣ ಸಚಿವ ಜಿ ಟಿ ...
ರೇವಾ ವಿಶ್ವವಿದ್ಯಾಲಯದ 3ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪಿ ಎಚ್ ಡಿ ಪದವಿ ಪಡೆದವರು
ರೇವಾ ವಿಶ್ವವಿದ್ಯಾಲಯದ 3ನೇ ವಾರ್ಷಿಕ ಘಟಿಕೋತ್ಸವದಲ್ಲಿ ಪಿ ಎಚ್ ಡಿ ಪದವಿ ಪಡೆದವರು

ಬೆಂಗಳೂರು: ರಾಜ್ಯ ಸರ್ಕಾರದ ವಿಶ್ವವಿದ್ಯಾಲಯಗಳ ಕಾರ್ಯವೈಖರಿ ಬಗ್ಗೆ ಉನ್ನತ ಶಿಕ್ಷಣ ಸಚಿವ ಜಿ ಟಿ ದೇವೇಗೌಡ ಸಿಟ್ಟು ಮತ್ತು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ನಿನ್ನೆ ನಗರದಲ್ಲಿ ರೇವಾ ವಿಶ್ವವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು, ಸರ್ಕಾರಿ ವಿ.ವಿಗಳ ಉಪ ಕುಲಪತಿಗಳು ಮತ್ತು ರಿಜಿಸ್ಟ್ರಾರ್ ಗಳು ಖಾಸಗಿ ವಿಶ್ವವಿದ್ಯಾಲಯಗಳಿಂದ ಕಲಿತುಕೊಳ್ಳುವುದು ಸಾಕಷ್ಟಿದೆ ಎಂದರು.

ನಮ್ಮ ವಿಶ್ವವಿದ್ಯಾಲಯಗಳು ಮತ್ತು ಸರ್ಕಾರಿ ಕಾಲೇಜುಗಳ ಸ್ಥಿತಿಗತಿ ಬಗ್ಗೆ ನನಗೆ ಬಹಳ ದುಃಖವಾಗುತ್ತದೆ. ನಮ್ಮ ವಿಶ್ವವಿದ್ಯಾಲಯಗಳ ಉಪ ಕುಲಪತಿಗಳು ಮತ್ತು ರಿಜಿಸ್ಟ್ರಾರ್ ಗಳನ್ನು ಖಾಸಗಿ ವಿಶ್ವವಿದ್ಯಾಲಯಗಳಿಗೆ ಕಳುಹಿಸಬೇಕು. ಅವರಿಂದ ಶೈಕ್ಷಣಿಕವಾಗಿ ಮತ್ತು ಆಡಳಿತಾತ್ಮಕವಾದ ವಿಚಾರಗಳನ್ನು ಕಲಿತುಕೊಳ್ಳುವುದು ಸಾಕಷ್ಟಿದೆ ಎಂದು ಹೇಳಿದರು.

ಸರ್ಕಾರದ ವಿ.ವಿಗಳು ಮತ್ತು ಕಾಲೇಜುಗಳಿಗೆ ಕೋಟ್ಯಂತರ ರೂಪಾಯಿ ಅನುದಾನ ನೀಡಿದರೂ ಕೂಡ ಅವರ ಕಾರ್ಯವೈಖರಿ ಕೆಲವು ಖಾಸಗಿ ವಿಶ್ವವಿದ್ಯಾಲಯಗಳು ಮತ್ತು ಕಾಲೇಜುಗಳಿಗೆ ಹೋಲಿಸಿದರೆ ತೀರಾ ಹದಗೆಟ್ಟಿವೆ. ವಿಶ್ವದರ್ಜೆಯ ಗುಣಮಟ್ಟಗಳಿಗೆ ವಿಶ್ವವಿದ್ಯಾಲಯಗಳನ್ನು ರೂಪಾಂತರ ಮಾಡಲು ಪ್ರಯತ್ನಿಸುವ ಬದಲು ನಮ್ಮ ಸರ್ಕಾರಿ ವಿ.ವಿಗಳ ಉಪ ಕುಲಪತಿಗಳು ತಪ್ಪು ಕೆಲಸಗಳನ್ನು ಮಾಡಿ ಸಂಸ್ಥೆಯ ಘನತೆ, ಗೌರವಗಳನ್ನು ಹಾಳು ಮಾಡುತ್ತಾರೆ ಎಂದು ಆರೋಪಿಸಿದರು.

ಇದರ ಜೊತೆಗೆ ಸಚಿವರು, ರಾಜಕೀಯದಲ್ಲಿ ಜನಪ್ರತಿನಿಧಿಗಳನ್ನು ಆಯ್ಕೆ ಮಾಡುವಾಗ ವಿದ್ಯಾರ್ಥಿಗಳು ಜಾಗರೂಕರಾಗಿರುವಂತೆ ಕಿವಿಮಾತು ಹೇಳಿದರು.

ಈ ವಿಭಾಗದ ಇತರ ಸುದ್ದಿ

No stories found.

Advertisement

X
Kannada Prabha
www.kannadaprabha.com