ಶುಕ್ರವಾರ ನಡೆದ ವಿಚಾರಣೆಯಲ್ಲಿ ಹೈಕೋರ್ಟ್ ಈ ನಿರ್ದೇಶನ ನೀಡಿದೆ.ಆಗಸ್ಟ್ 1ರಿಂದ ಅನಧಿಕೃತ ಫ್ಲೆಕ್ಸ್, ಬ್ಯಾನರ್ಗಳನ್ನು ತೆಗೆದು ಹಾಕುವ ಕಾರ್ಯಾಚರಣೆ ಪ್ರಾರಂಭವಾಗಿದ್ದು ಇದುವರೆಗೆ ಸುಮಾರು 22,000 ಜಾಹೀರಾತು ಫಲಕಗಳನ್ನು ತೆರವುಗೊಳಿಸಲಾಗಿದೆ ಎಂದು ಬಿಬಿಎಂಪಿ ನ್ಯಾಯಾಲಯಕ್ಕೆ ತಿಳಿಸಿದೆ. ಅನಧಿಕೃತ ಫ್ಲೆಕ್ಸ್, ಬ್ಯಾನರ್ ಹಾಕಿರುವವರ ವಿರುದ್ಧ ನಗರದಾದ್ಯಂತ 223 ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ ಎಂದು ನಗರದ ಪೊಲೀಸರು ನ್ಯಾಯಾಲಯಕ್ಕೆ ತಿಳಿಸಿದರು.