

ಕಲಬುರಗಿ: ಕಲಬುರಗಿ ನಗರದ ಕ್ಲಬ್ ವೊಂದರ ಮೇಲೆ ದಾಳಿ ನಡೆಸಿದ ಪೊಲೀಸರು ಅಕ್ರಮ ಜೂಜಾಟದಲ್ಲಿ ತೊಡಗಿದ್ದ 18 ಮಂದಿಯನ್ನು ಬಂಧಿಸಿದ್ದಾರೆ.
ಬಂಧಿತರಿಂದ 70 ಸಾವಿರ ರೂಪಾಯಿ ನಗದು ಹಾಗೂ 17 ಮೊಬೈಲ್ ಪೋನ್ ಗಳನ್ನು ವಶಪಡಿಸಿಕೊಳ್ಳಲಾಗಿದೆ.
ಇತ್ತೀಚಿಗೆ ಕಲಬುರಗಿ ನಗರದಲ್ಲಿ ಜೂಜಾಟದ ಅಡ್ಡೆಗಳು ನಾಯಿಕೊಡೆಗಳಂತೆ ತಲೆ ಎತ್ತಿದ್ದು, ರಾತ್ರಿ ವೇಳೆಯಲ್ಲಿ ಹೆಚ್ಚಾಗಿ ಅಕ್ರಮವಾಗಿ ಜೂಜಾಟ ನಡೆಯುತ್ತಿದ್ದ ಬಗ್ಗೆ ಮಾಹಿತಿ ಪಡೆದುಕೊಂಡಿದ್ದ ಪೊಲೀಸರು ಖಚಿತ ಮಾಹಿತಿ ಮೇರೆಗೆ ಕ್ಲಬ್ ಮೇಲೆ ದಾಳಿ ನಡೆಸಿದ್ದು, ಜೂಜಾಟದಲ್ಲಿ ತೊಡಗಿದ್ದವರನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.